ಪ್ರಣಬ್ ಮುಖರ್ಜಿ, ನರೇಂದ್ರ ಮೋದಿ 
ದೇಶ

ಹೊಸ ವರ್ಷಾಚರಣೆ: ದೇಶದ ಜನತೆಗೆ ಶುಭಾಶಯ ಕೋರಿದ ಮೋದಿ, ಪ್ರಣಬ್

ಹೊಸ ವರ್ಷಕ್ಕೆ ಕಾಲಿಡುತ್ತಿರುವ ದೇಶದ ಜನತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಶುಕ್ರವಾರ ಶುಭಾಶಯ ಕೋರಿದ್ದಾರೆ...

ನವದೆಹಲಿ: ಹೊಸ ವರ್ಷಕ್ಕೆ ಕಾಲಿಡುತ್ತಿರುವ ದೇಶದ ಜನತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಶುಕ್ರವಾರ ಶುಭಾಶಯ ಕೋರಿದ್ದಾರೆ.

ದೇಶದ ಜನತೆಗೆ ಟ್ವಿಟರ್ ಮೂಲಕ ಶುಭಾಶಯ ಕೋರಿರುವ ಮೋದಿ ಅವರು, 2016ರ ಹೊಸವರ್ಷ ಆರಂಭವಾಗಿದ್ದು, ಈ ಹೊಸ ವರ್ಷ ಪ್ರತಿಯೊಬ್ಬರ ಜೀವನದಲ್ಲೂ, ಸುಖ, ಶಾಂತಿ, ನೆಮ್ಮದಿ ಹಾಗೂ ಉತ್ತಮ ಆರೋಗ್ಯ ನೀಡಲಿ ಎಂದು ಹಾರೈಸುತ್ತೇನೆಂದು ಹೇಳಿದ್ದಾರೆ.

ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರು ಸಹ ಟ್ವಿಟರ್ ಮೂಲಕ ದೇಶದ ಜನತೆಗೆ ಶುಭಾಶಯ ಕೋರಿದ್ದು, ಪ್ರತೀಯೊಬ್ಬ ದೇಶದ ಜನತೆಗೂ ಹೊಸ ವರ್ಷದ ಶುಭಾಶಯಗಳು. ಈ ಹೊಸ ವರ್ಷ ಪ್ರತಿಯೊಬ್ಬರಿಗೆ ಸಂತೋಷ ಹಾಗೂ ಶ್ರೀಮಂತಿಕೆಯನ್ನು ನೀಡಲಿ ಎಂದು ಹಾರೈಸುತ್ತೇನೆ ಎಂದು ಹೇಳಿದ್ದಾರೆ.

ಹೊಸ ವರ್ಷದ ಮೂಲಕ ಮನುಷ್ಯ ಮತ್ತು ಪ್ರಕೃತಿ ನಡುವಿನ ಸಂಬಂಧ ವೃದ್ಧಿಸುವ ಕೆಲಸಗಳಾಗಲಿ. ಜನರು ದೇಶವನ್ನು ಸ್ವಚ್ಛ, ಹಸಿರು ಮತ್ತು ಪರಿಸರ ಮಾಲಿನ್ಯದಿಂದ ಮುಕ್ತ ಮಾಡುವತ್ತ ಶ್ರಮವಹಿಸಲಿ, ಮಾಲಿನ್ಯ ಮುಕ್ತ ದೇಶದತ್ತ ಎಲ್ಲರೂ ಕೆಲಸ ಮಾಡೋಣ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 800 ಕೋಟಿ ರೂ. ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ