ಬಿಜೆಪಿ ಸಂಸದೆ ಸಾಧ್ವಿ ಪ್ರಾಚಿ 
ದೇಶ

4 ಮಕ್ಕಳನ್ನು ಹೆರಲು ಹೇಳಿದ್ದು, 40 ನಾಯಿಗಳನ್ನಲ್ಲ: ಸಾಧ್ವಿ ಪ್ರಾಚಿ

ಹಿಂದೂ ಮಹಿಳೆಯರಿಗೆ 4 ಮಕ್ಕಳನ್ನಷ್ಟೇ ಹೆರಲು ಹೇಳಿದ್ದೇ ಹೊರತು 40 ನಾಯಿಗಳನ್ನು ಹೆರಲು...

ನವದೆಹಲಿ: ಹಿಂದೂ ಮಹಿಳೆಯರಿಗೆ 4 ಮಕ್ಕಳನ್ನಷ್ಟೇ ಹೆರಲು ಹೇಳಿದ್ದೇ ಹೊರತು 40 ನಾಯಿಗಳನ್ನು ಹೆರಲು ಅಲ್ಲ ಎಂದು ಹೇಳುವ ಮೂಲಕ ಬಿಜೆಪಿ ಸಂಸದೆ ಸಾಧ್ವಿ ಪ್ರಾಚಿ ಈಗ ಮತ್ತೊಂದು ವಿವಾದಕ್ಕೀಡಾಗಿದ್ದಾರೆ.

ವಿವಾದಾತ್ಮಕ ಹೇಳಿಕೆಗಳನ್ನು ನೀಡಿ ಬಿಜೆಪಿಯನ್ನು ಮುಜುಗರಕ್ಕೀಡು ಮಾಡುತ್ತಿರುವ ಬಿಜೆಪಿ ಸಂಸದರು ಈಗ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡುವ ಮುಖಾಂತರ ಮತ್ತೆ ಸುದ್ದಿಗೆ ಬಂದಿದ್ದು, ಇಂದು ಬದೌನ್ನಲ್ಲಿ ಮಾತನಾಡಿದ ಸಾಧ್ವಿ ಪ್ರಾಚಿ ಅವರು ತಮ್ಮ ಹೇಳಿಕೆ ಕುರಿತಂತೆ ಸ್ಪಷ್ಟನೆ ನೀಡಿದ್ದಾರೆ. ನಾನು ಹಿಂದೂ ಮಹಿಳೆಯರಿಗಷ್ಟೇ 4 ಮಕ್ಕಳನ್ನು ಹೆರಲು ಹೇಳಿದ್ದು, ನನ್ನ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ. ಹಣಕ್ಕಾಗಿ ಹಿಂದೂ ಮಹಿಳೆಯರನ್ನು ಮದುವೆಯಾಗುತ್ತಿದ್ದಾರೆ. ಮತ್ತು ಇದೇ ಹಣವನ್ನು 'ಲವ್ ಜಿಹಾದ್'ಗಾಗಿ ಬಳಸಲಾಗುತ್ತಿದೆ. ಇಂತಹ ಘಟನೆಗಳು ದೇಶದಲ್ಲಿ ನಿಲ್ಲಬೇಕು ಎಂದು ಹೇಳಿದ್ದಾರೆ.                    

ಹಿಂದೂ ಮಹಿಳೆಯರು ಕನಿಷ್ಠ 4 ಮಕ್ಕಳಿಗೆ ಜನ್ಮ ನೀಡಬೇಕು ಎಂದು ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ನೀಡಿದ್ದ ಹೇಳಿಕೆಗೆ ಸಾಥ್ ನೀಡಿದ್ದ ಬಿಜೆಪಿಯ ಮುಖಂಡೆ ಸಾಧ್ವಿ ಪ್ರಾಚಿ, ವಿಶ್ವ ಹಿಂದೂ ಪರಿಷತ್ ನ ಸಮಾಜೋತ್ಸವ ಸಮಾರಂಭದಲ್ಲಿ ನಾವಿಬ್ಬರು, ನಮಗೆ ನಾಲ್ವರು ಎಂದು ಹೇಳಿದ್ದರು. ಬಿಜೆಪಿ ಸಂಸದರ ಈ ಹೇಳಿಕೆಗೆ ದೇಶದಾದ್ಯಂತ ವಿರೋಧ ವ್ಯಕ್ತವಾಗಿತ್ತು. ಸಂಸದರ ಹೇಳಿಕೆಗಳಿಂದ ತೀವ್ರ ಮುಜುಗರಕ್ಕೊಳಗಾಗಿದ್ದ ಪ್ರಧಾನಿ ನರೇಂದ್ರಮೋದಿಯವರು ಸಾರ್ವಜನಿಕವಾಗಿ ಹೇಳಿಕೆ ನೀಡುವಾಗ ಯೋಚಿಸಿ ಮಾತನಾಡಬೇಕು ಎಂದು ಸಂಸದರ ಕಿವಿ ಹಿಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!

ಸ್ಟಾರ್‌ಲಿಂಕ್ ವಿವಾದ: ಭಾರತ ವಸಾಹತಲ್ಲ- Elon Musk ಗೆ ಕಮಲ್ ಹಾಸನ್ ತಿರುಗೇಟು

'ರಾಹುಲ್ ಗಾಂಧಿ ಅವರೇ, ನಿಮ್ಮ ಉದ್ದೇಶಗಳು ಎಂದಿಗೂ ಈಡೇರಲ್ಲ': ವಿಪಕ್ಷದವರದ್ದು 'ನಗರ ನಕ್ಸಲ್' ಮನಸ್ಥಿತಿ; ನಿತಿನ್ ನಬಿನ್