ಕೊಲಂಬೋ: ಶ್ರೀಲಂಕಾದ ನೂತನ ಅಧ್ಯಕ್ಷ ಮೈತ್ರಿಪಾಲಾ ಸಿರಿಸೇನಾ ಅವರು ಫೆ.16ರಂದು ಭಾರತಕ್ಕೆ ಭೇಟಿ ನೀಡಲಿದ್ದಾರೆ.
ಭಾರತದೊಂದಿಗಿನ ಸಂಬಂಧವನ್ನು ಇನ್ನಷ್ಟು ಗಟ್ಟಿಗೊಳಿಸುವ ನಿಟ್ಟಿನಲ್ಲಿ 2 ದಿನಗಳ ಭಾರತ ಪ್ರವಾಸಕ್ಕೆ ಸಿರಿಸೇನಾ ಮುಂದಾಗಿದ್ದಾರೆ. ಇದು ಅವರು ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಮಾಡುತ್ತಿರುವ ಮೊದಲ ವಿದೇಶ ಪ್ರವಾಸವಾಗಲಿದೆ.
ಬಳಿಕ ಮಾ.13ರಿಂದ 15ರವರೆಗೆ ಪ್ರಧಾನಿ ನರೇಂದ್ರ ಮೋದಿ ಅವರೂ ಲಂಕಾ ಪ್ರವಾಸ ಮಾಡಲಿದ್ದಾರೆ. ಈ ವೇಳೆ ಅವರು ಉತ್ತರ ತಮಿಳು ನಗರವಾದ ಜಾಫ್ನಾಗೆ ಭೇಟಿ ನೀಡುವ ಸಾಧ್ಯತೆಯಿದೆ.