ನವದೆಹಲಿ: 2016ರೊಳಗೆ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಪ್ರಾರಂಭಗೊಳ್ಳದಿದ್ದರೆ ನ್ಯಾಯಾಲಯದ ಮೆಟ್ಟಿಲೇರುವುದಾಗಿ ಬಿಜೆಪಿ ಮುಖಂಡ ಸುಬ್ರಹ್ಮಣ್ಯನ್ ಸ್ವಾಮಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರಕ್ಕೆ ಗಡುವು ನೀಡಿದ್ದಾರೆ.
ವಿಶ್ವ ಹಿಂದೂ ಪರಿಷತ್‌ನ ಸ್ವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಬಿಜೆಪಿ ಹಿರಿಯ ನಾಯಕ ಸುಬ್ರಹ್ಮಣ್ಯನ್ ಸ್ವಾಮಿ 2016ರೊಳಗೆ ರಾಮ ಮಂದಿರ ನಿರ್ಮಾಣ ಕಾರ್ಯ ಆರಂಭವಾಗಬೇಕು. ಇಲ್ಲದಿದ್ದರೆ ಕೋರ್ಟ್ ಮೆಟ್ಟಿಲೇರುವುದು ಅನಿವಾರ್ಯವಾಗಬಹುದು ಎಂದು ಹೇಳಿದ್ದಾರೆ.
ಬ್ರಿಟಿಷರು ಬರೆದಿರುವ ಇತಿಹಾಸವನ್ನು ಮಕ್ಕಳಿಗೆ ಬೋಧಿನೆ ಮಾಡಲಾಗುತ್ತಿದೆ. ದೇಶದಲ್ಲಿ ಶಿಕ್ಷಣ ಪದ್ಧತಿ ಹದಗೆಟ್ಟಿದ್ದು ಅಸಂಬಂದ್ಧವಾದ ಹಾಗೂ ತಿರುಚಿದ ಇತಿಹಾಸವನ್ನು ಕಲಿಯುತ್ತಿರುವ ಮಕ್ಕಳಲ್ಲಿ ದೇಶಪ್ರೇಮ ಮೂಡಲು ಹೇಗೆ ಸಾಧ್ಯ. ಹೀಗಾಗಿ ಬಹುಮತದ ಸರ್ಕಾರ ಅಧ್ಯಯನ ಕ್ರಮವನ್ನು ಬದಲಾವಣೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ದೇಶದಲ್ಲಿ ಹಿಂದೂ ಜನ ಸಂಖ್ಯೆ ಶೇಕಡ 80ರಷ್ಟು ಇದ್ದು, ವಿವಿಧ ರಾಜಕೀಯ ಪಕ್ಷಗಳ ಆಶ್ರಯಗಳಲ್ಲಿ ವಿಂಗಡಿಸಲಾಗುತ್ತಿದೆ ಎಂದರು.