ಒಂದೂವರೆ ವರ್ಷದ ಮಗುವಿನ ಮೇಲೆ ಅತ್ಯಾಚಾರ
ಒಂದುವರೆ ವರ್ಷದ ಮಗುವಿನ ಮೇಲೆ ಅತ್ಯಾಚಾರ ಮಾಡಿ ನಂತರ ಉಸಿರುಗಟ್ಟಿಸಿ ಕೊಲೆ ಮಾಡಿರುವ...
ಇಸ್ಲಾಮಾಬಾದ್: ಒಂದುವರೆ ವರ್ಷದ ಮಗುವಿನ ಮೇಲೆ ಅತ್ಯಾಚಾರ ಮಾಡಿ ನಂತರ ಉಸಿರುಗಟ್ಟಿಸಿ ಕೊಲೆ ಮಾಡಿರುವ ಅಮಾನವೀಯ ಕೃತ್ಯ ಪಾಕಿಸ್ತಾನದ ಕರಾಚಿಯಲ್ಲಿ ನಡೆದಿದೆ.
ಮನೆಯಿಂದ ನಾಪತ್ತೆಯಾಗಿದ್ದ ಮಗುವಿಗಾಗಿ ಹುಡುಕಾಟ ನಡೆಸಿದ ಪೋಷಕರಿಗೆ ಮನೆಯ ಹತ್ತಿರದ ರಸ್ತೆಯಲ್ಲಿ ಮಗುವಿನ ದೇಹ ಪತ್ತೆಯಾಗಿದೆ. ಕೂಡಲೇ ಪೋಷಕರು ಸ್ಥಳೀಯ ಪೊಲೀಸರಿಗೆ ದೂರು ನೀಡಿದ್ದಾರೆ.
ದೂರು ದಾಖಲಿಸಿಕೊಂಡ ಪೊಲೀಸರು ಸ್ಥಳ ಪರೀಶಲನೆ ನಡೆಸಿದ್ದು, ಪ್ರಾಥಮಿಕ ತನಿಖೆ ವೇಳೆಯಲ್ಲಿ ಮಗುವಿನ ಮೇಲೆ ಅತ್ಯಾಚಾರ ಮಾಡಿ ನಂತರ ಉಸಿರುಗಟ್ಟಿಸಿ ಕೊಲೆ ಮಾಡಿರುವುದಾಗಿ ಹೆಚ್ಚುವರಿ ಪೊಲೀಸ್ ಆಯುಕ್ತೆ ರುಬೀನಾ ಹಸೀನ್ ತಿಳಿಸಿದ್ದಾರೆ. ತನಿಖೆ ಪ್ರಾರಂಭಿಸಿರುವ ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.