`ಘೋರ' ಪರಿಶೀಲನೆ
ಮಾಹಿತಿ ತಂತ್ರಜ್ಞಾ ನ ಕಾಯ್ದೆಯ ನಿಬಂಧನೆಯಲ್ಲಿ ಬರುವ `ಘೋರ ಅಪರಾಧ' ಪದವನ್ನು ಪರಿಶೀಲಿಸುವುದಾಗಿ ಸುಪ್ರೀಂ ಕೋರ್ಟ್ ...
ನವದೆಹಲಿ: ಮಾಹಿತಿ ತಂತ್ರಜ್ಞಾ ನ ಕಾಯ್ದೆಯ ನಿಬಂಧನೆಯಲ್ಲಿ ಬರುವ `ಘೋರ ಅಪರಾಧ' ಪದವನ್ನು ಪರಿಶೀಲಿಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ. ಆಕ್ಷೇಪಾರ್ಹ ಕಮೆಂಟ್ಗಳನ್ನು ಪೋಸ್ಟ್ ಮಾಡುವ ವೆಬ್ ಬಳಕೆದಾರರನ್ನು ಬಂಧಿಸುವ ಅಧಿಕಾರವನ್ನು ಈ ಪದವು ಪೋಲೀಸರಿಗೆ ನೀಡುತ್ತದೆ. ಪ್ರಕರಣವೊಂದಕ್ಕೆ ಸಂಬಂಧಿಸಿ ಬುಧವಾರ ಸುಪ್ರೀಂನಲ್ಲಿ ಹೆಚ್ಚುವರಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಹಿಂಸೆಗೆ ಪ್ರೇರಣೆ ನೀಡುವ ವಿಚಾರ ಬಿಟ್ಟು ಬೇರೆ ಯಾವುದೂ `ಘೋರ ಅಪರಾಧ' ಆಗುವುದಿಲ್ಲ ಎಂದು ವಾದಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, `ಘೋರ ಅಪರಾಧ' ಎಂಬ ಪದವೇ ಅಸ್ಪಷ್ಟವಾಗಿದೆ. ಈ ಬಗ್ಗೆ ಪರಿಶೀಲನೆ ನಡೆಸಬೇಕಾದ ಅವಶ್ಯಕತೆಯಿದೆ ಎಂದು ಅಭಿಪ್ರಾಯಪಟ್ಟಿತು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.