ಸಾಂದರ್ಭಿಕ ಚಿತ್ರ 
ದೇಶ

ಇಂಡೋ-ಮಾಯನ್ಮಾರ್ ಗಡಿಯಲ್ಲಿ ಬಾಂಬ್ ಸ್ಫೋಟ: ಓರ್ವ ಸಾವು

ಮಾಯನ್ಮಾರ್ ಗಡಿಭಾಗದಲ್ಲಿ ಬಾಂಬ್ ಸ್ಫೋಟಿಸಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ...

ಇಂಫಾಲಾ: ಇಂಡೋ-ಮಾಯನ್ಮಾರ್ ಗಡಿಭಾಗದಲ್ಲಿ ಬಾಂಬ್ ಸ್ಫೋಟಿಸಿದ್ದು, ಓರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ.

ಮಣಿಪುರದ ಉಖ್ರುಲ್ ಜಿಲ್ಲೆಗೆ ಹೊಂದಿಕೊಂಡಿರುವ ಮಾಯನ್ಮಾರ್ ಗಡಿಭಾಗದಲ್ಲಿ ಇಂದು ಬೆಳಿಗ್ಗೆ ಪ್ರಬಲ ಬಾಂಬ್ ಸ್ಫೋಟಿಸಿ ಓರ್ವ ಮೃತಪಟ್ಟು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಭಾರತ-ಮ್ಯಾನ್ಮಾರ್ ಗಡಿಯ ತರೋಂಗ’ ಎಂಬಲ್ಲಿ ಈ ಸ್ಫೋಟ ಸಂಭವಿಸಿದೆ. ಭದ್ರತಾ ಪಡೆಯ ಯೋಧರನ್ನು ಗುರಿಯಾಗಿಟ್ಟುಕೊಂಡು ಉಗ್ರರು ಈ ಕೃತ್ಯ ಎಸಗಿದ್ದಾರೆ. ಸೈನಿಕರ ವಾಹನ ತೆರಳುವ ರಸ್ತೆಯ ಬದಿಯಲ್ಲಿ ನೆಲದ ಒಳಗಡೆ ಈ ಪ್ರಬಲ ಬಾಂಬ್ ಅಡಗಿಸಿಡಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಉಗ್ರರು ಸಮೀಪದ ಪೊದೆಗಳಲ್ಲಿ ಅಡಗಿರುವ ಸಾಧ್ಯತೆಯಿದ್ದು, ಶೋಧಕಾರ್ಯ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಪ್ರದೇಶದಲ್ಲಿ ಭಾರಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಹೆಚ್ಚಿನ ಸಂಖ್ಯೆಯ ಸೈನಿಕರನ್ನು ನಿಯೋಜಿಸಲಾಗಿದೆ. ಸ್ಫೋಟ ಎಷ್ಟು ಪ್ರಬಲವಾಗಿತ್ತೆಂದರೆ, ಬಾಂಬ್ ಸ್ಫೋಟಿಸಿದ ಶಬ್ದ ಒಂದು ಕಿಲೋ ಮೀಟರ್‌ಗೂ ಹೆಚ್ಚು ದೂರಕ್ಕೆ ಕೇಳಿದೆ. ಇದುವರೆಗೆ ಯಾರೂ ಈ ಸ್ಫೋಟದ ಹೊಣೆ ಹೊತ್ತಿಲ್ಲ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ತಮಿಳುನಾಡಿಗೆ ಕಾವೇರಿ, ಕನ್ನಡಿಗರಿಗೆ ಮತ್ತೆ ಚೊಂಬು: ನಿತ್ಯ 9,000 ಕ್ಯೂಸೆಕ್ ನೀರು ಬಿಡಲು CWRC ಸೂಚನೆ!

ಸೀತಾಪುರದಲ್ಲಿ ವಿಚಿತ್ರ ಪ್ರಕರಣ: ಹಗಲು ಪ್ರೇಮಿ, ರಾತ್ರಿ ಗಂಡ ಬೇಕಂತೆ! ಇಬ್ಬರ ಜತೆ ಸಂಸಾರ ನಡೆಸಲು ಪೊಲೀಸ್ ಠಾಣೆ ಮೆಟ್ಟಿಲೇರಿದ ಮಹಿಳೆ! Video

‘ಏನೇನ್ ಮಾಡ್ತಾರೋ ಗೊತ್ತಿಲ್ಲ’: Donald Trump ‘ಅನಿರೀಕ್ಷಿತ ವರ್ತನೆ’ ಬಗ್ಗೆ ಎಚ್ಚರಿಕೆ: ಮೋದಿ ಭೇಟಿ ಬಳಿಕ ಜಂಟಿ ಸುದ್ದಿಗೋಷ್ಠಿಗೆ ಭಾರತ ಹಿಂದೇಟು!

ಪ್ರತಿಪಕ್ಷಗಳ ಪ್ರತಿಭಟನೆ, ಗದ್ದಲದ ನಡುವೆ ಯಾವುದೇ ಚರ್ಚೆಯಿಲ್ಲದೇ ವಿಧಾನ ಪರಿಷತ್ತಿನಲ್ಲಿ ಎರಡು ವಿಧೇಯಕಗಳು ಪಾಸ್

Biggboss Kannada ಅಗ್ನಿಪರೀಕ್ಷೆ: ಗೆಟ್ ಔಟ್, ಇದೆಲ್ಲಾ ಬೇಡ ಬ್ರೋ; ವಿನಯ್ ಗೌಡಗೆ ಸ್ಪರ್ಧಿ ತಿರುಗೇಟು, Video ವೈರಲ್!