ಮೋದಿ ವಿರುದ್ಧ ಅರ್ಜಿ ವಜಾ
2012ರಲ್ಲಿ ಗುಜರಾತ್ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ವೇಳೆ ದೋಷಪೂರಿತ ಪ್ರಮಾಣ ಪತ್ರ ಸಲ್ಲಿಸಿದ್ದಾರೆಂದು ಆರೋಪಿಸಿ...
ಅಹಮದಾಬಾದ್: 2012ರಲ್ಲಿ ಗುಜರಾತ್ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ವೇಳೆ ದೋಷಪೂರಿತ ಪ್ರಮಾಣ ಪತ್ರ ಸಲ್ಲಿಸಿದ್ದಾರೆಂದು ಆರೋಪಿಸಿ ಆಮ್ ಆದ್ಮಿ ಪಕ್ಷದ ಮುಖಂಡರೊಬ್ಬರು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿ ಅಹಮದಾಬಾದ್ ಜಿಲ್ಲಾ ಹೆಚ್ಚುವರಿ ನ್ಯಾಯಾಲಯ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕ್ಲೀನ್ ಚಿಟ್ ನೀಡಿದೆ.
ಪ್ರಮಾಣ ಪತ್ರದಲ್ಲಿ ಪ್ರಧಾನಿ ಅವರು ತಮ್ಮ ಮದುವೆ ವಿಚಾರವನ್ನು ಮುಚ್ಚಿಟ್ಟಿದ್ದರು ಎಂದು ಆರೋಪಿಸಿ ಈ ಅರ್ಜಿ ಸಲ್ಲಿಸಲಾಗಿತ್ತು.
ಆದರೆ, ಅರ್ಜಿ ತಿರಸ್ಕರಿಸಿದ ನ್ಯಾಯಾಲಯ ಅರ್ಜಿ ಸಲ್ಲಿಸಿದ ವ್ಯಕ್ತಿ ಮೋದಿ ಅವರು ಸ್ಪರ್ಧಿಸಿದ್ದ ಮಣಿನಗರದ ಮತದಾರ ಅಲ್ಲ. ಜತೆಗೆ, ಅವಧಿ ಮೀರಿದ ಬಳಿಕ ಈ ಅರ್ಜಿ ಸಲ್ಲಿಸಲಾಗಿದೆ. ಹಾಗಾಗಿ ಈ ಅರ್ಜಿಯನ್ನು ಪುರಸ್ಕರಿಸುವುದರಲ್ಲಿ ಅರ್ಥ ಇಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.