ಮುಜಾಫರ್‌ನಗರ: ಅಪ್ರಾಪ್ತ ಬಾಲಕಿ ಮೇಲೆ ಐವರು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಮೀರಾಪುರ್‌ನಲ್ಲಿ ನಡೆದಿದೆ.
ನಿನ್ನೆ ರಾತ್ರಿ 16 ವರ್ಷದ ಬಾಲಕಿಯ ಮನೆಯಿಂದ ಅವಳನ್ನು ಅಪಹರಿಸಿ ಕೊಂಡೊಯ್ದ ದುಷ್ಕರ್ಮಿಗಳು ಸಮೀಪದ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ.
ಬಾಲಕಿಯ ಸಹೋದರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಆರೋಪಿಗಳನ್ನು ಶಕೀಲ್, ವಕೀಲ್, ಮಿಂಟು, ಜಾವೇದ್ ಹಾಗೂ ಶರಾಬ್ ಎಂದು ಗುರುತಿಸಲಾಗಿದೆ.
ಈ ವಿಷಯವನ್ನು ಯಾರಿಗೂ ಹೇಳದಂತೆ ಹಾಗೂ ವಿಷಯ ಬಾಯ್ಬಿಟ್ಟರೆ ಕೊಲ್ಲುವುದಾಗಿಯೂ ಬಾಲಕಿಗೆ ಆರೋಪಿಗಳು ಬೆದರಿಕೆ ಹಾಕಿದ್ದಾರೆ. ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ದುಷ್ಕರ್ಮಿಗಳು ತಲೆ ಮರೆಸಿಕೊಂಡಿದ್ದು ಶೋಧ ಕಾರ್ಯ ನಡೆದಿದೆ ಎಂದು ಮೂಲಗಳು ತಿಳಿಸಿವೆ.