ಪ್ರಧಾನಿಮಂತ್ರಿ ನರೇಂದ್ರ ಮೋದಿ 
ದೇಶ

ವಿದ್ಯಾರ್ಥಿಗಳನ್ನು 'ಮನ್ ಕಿ ಬಾತ್‌'ಗೆ ಆಹ್ವಾನಿಸಿದ ಮೋದಿ

ಪರೀಕ್ಷೆಯ ಅನುಭವ ಕುರಿತಂತೆ ತಮ್ಮ ಅನುಭವಗಳನ್ನು ಹಂಚಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಬಾನುಲಿಯ...

ನವದೆಹಲಿ: ಪರೀಕ್ಷೆಯ ಅನುಭವ ಕುರಿತಂತೆ ತಮ್ಮ ಅನುಭವಗಳನ್ನು ಹಂಚಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ  'ಮನ್ ಕಿ ಬಾತ್‌' ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಪ್ರಧಾನಿ ಮೋದಿ ಭಾನುವಾರ ಆಹ್ವಾನ ನೀಡಿದ್ದಾರೆ.

ಮಾ.2 ರಂದು ಕೇಂದ್ರೀಯ ಫ್ರೌಢಶಿಕ್ಷಣ ಮಂಡಳಿ(ಸಿಬಿಎಸ್‌ಸಿ)ಯ ಪರೀಕ್ಷೆ ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ನಿನ್ನೆ ಮಾತನಾಡಿರುವ ಪ್ರಧಾನಿಮಂತ್ರಿ ನರೇಂದ್ರ ಮೋದಿ ಅವರು, ಪರೀಕ್ಷೆಯ ತಯಾರಿ ಕುರಿತಂತೆ ಮಕ್ಕಳ ಅನುಭವಗಳನ್ನೇಕೆ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಹಂಚಿಕೊಳ್ಳಬಾರದು ಎಂಬುದರ ಕುರಿತು ಹಲವು ದಿನಗಳಿಂದ ಯೋಚಿಸಿತ್ತಿದ್ದೆ. ಹಾಗಾಗಿ ವಿದ್ಯಾರ್ಥಿಗಳನ್ನು ಮನ್ ಕಿ ಬಾತ್ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದೇನೆ ಎಂದು ಹೇಳಿದ್ದಾರೆ.

ನಾನು ನನ್ನ ಆಲೋಚನೆಗಳು ಹಾಗೂ ಕೆಲವು ಸ್ವಾರಸ್ಯಕರ ಸಂಗತಿಗಳನ್ನು ಕಾರ್ಯದಲ್ಲಿ ಹಂಚಿಕೊಳ್ಳುತ್ತಿರುತ್ತೇನೆ. ಅನುಭವಗಳನ್ನು ಹಂಚಿಕೊಂಡಾಗ ಯುವಕರಿಗೆ ಸ್ಫೂರ್ತಿ ನೀಡಿದಂತಾಗುತ್ತದ್ದಲ್ಲದೇ, ಪರೀಕ್ಷೆಯ ಸಮಯದಲ್ಲಿ ಅವರಿಗೆ ಪ್ರೇರಣೆ ನೀಡಿದಂತಾಗುತ್ತದೆ. ಹಾಗಾಗಿ ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಕರು ಸಹ 'ಮನ್ ಕಿ ಬಾತ್‌' ಕಾರ್ಯಕ್ರಮದಲ್ಲಿ ಭಾಗಿಯಾಗಿ ತಮ್ಮ ಅನುಭವಗಳನ್ನು ಹಂಚಿಕೊಳ್ಳುವಂತೆ ಆಹ್ವಾನ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!