ಅತ್ಯಾಚಾರ (ಸಾಂದರ್ಭಿಕ ಚಿತ್ರ) 
ದೇಶ

ಮತ್ತೊಂದು 'ಹತ್ಯಾಚಾರ' ಪ್ರಕರಣ: ಗುಪ್ತಾಂಗದಲ್ಲಿ ಮಡಕೆ, ಕಲ್ಲು ಚೂರು ಪತ್ತೆ

ದೆಹಲಿಯಲ್ಲಿ ಮತ್ತೊಂದು ನಿರ್ಭಯಾ ಪ್ರಕರಣ ದಾಖಲಾಗಿದ್ದು, ಯುವತಿಯೊಬ್ಬಳ ಮೇಲೆ ಘೋರ ಸಾಮೂಹಿಕ 'ಹತ್ಯಾಚಾರ' ಎಸಗಿರುವುದು ತಡವಾಗಿ ಬೆಳಕಿಗೆ ಬಂದಿದೆ..

ನವದೆಹಲಿ: ದೆಹಲಿಯಲ್ಲಿ ಮತ್ತೊಂದು ನಿರ್ಭಯಾ ಪ್ರಕರಣ ದಾಖಲಾಗಿದ್ದು, ಯುವತಿಯೊಬ್ಬಳ ಮೇಲೆ ಘೋರ ಸಾಮೂಹಿಕ ಹತ್ಯಾಚಾರ ಎಸಗಿರುವುದು ತಡವಾಗಿ ಬೆಳಕಿಗೆ ಬಂದಿದೆ.

ಮಹಿಳೆಯರಿಗೆ ರಾಷ್ಟ್ರ ರಾಜಧಾನಿ ಸುರಕ್ಷಿತವಲ್ಲ ಎಂಬ ಮಾತು ಮತ್ತೆ ಸಾಬೀತಾಗಿದ್ದು, ದೆಹಲಿ ಹೊರವಲಯದ ರೋಹ್‌ಟಕ್ ನಲ್ಲಿ 8 ಮಂದಿ ಕಾಮುಕರು ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಅತ್ಯಮಾನುಷವಾಗಿ ಕೊಲೆಗೈದಿರುವ ವಿಚಾರ ತಡವಾಗಿ ಬೆಳಕಿಗೆ ಬಂದಿದೆ.

ಸುಮಾರು 28 ವರ್ಷದ ಯುವತಿಯ ಶವ ರೋಹ್‌ಟಕ್ ಬಳಿ ಪತ್ತೆಯಾಗಿದ್ದು, ಮೃತ ದೇಹದ ಕೆಲ ಭಾಗಗಳನ್ನು ಬೀದಿನಾಯಿಗಳು ಕಿತ್ತುತಿಂದಿವೆ. ಅಮಾನುಷವೆಂದರೆ ಯುವತಿಯನ್ನು ತಮ್ಮ ಕಾಮತೃಷೆಗೆ ಬಳಸಿಕೊಂಡ ಕಾಮುಕರು ಆಕೆಯ ಗುಪ್ತಾಂಗಕ್ಕೆ ಮಡಿಕೆ ಚೂರುಗಳನ್ನು, ಕಲ್ಲಿನ ಚೂರುಗಳನ್ನು ಮತ್ತು ಕಾಂಡೋಮ್‌ಗಳನ್ನು ತುರುಕಿರುವುದು ಬೆಳಕಿಗೆ ಬಂದಿದೆ.

ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರೇ ಬೆಚ್ಚಿಬಿದ್ದಿದ್ದು, ತಮ್ಮ 30 ವರ್ಷದ ಅನುಭವದಲ್ಲಿ ಇಂತಹ ಘೋರ ಪ್ರಕರಣವನ್ನು ಕಂಡಿರಲಿಲ್ಲ ಎಂದು ಹೇಳಿದ್ದಾರೆ. 'ಯುವತಿಯ ತಲೆಗೆ ಕಬ್ಬಿಣದ ರಾಡ್ ನಿಂದ ಬಲವಾಗಿ ಬಡಿಯಲಾಗಿದೆ. ಇದರಿಂದ ಆಕೆಯ ಪ್ರಜ್ಞೆ ಕಳೆದುಕೊಂಡಿದ್ದು, ಬಳಿಕ ಆಕೆಯನ್ನು ಸಾಮೂಹಿಕವಾಗಿ ಅತ್ಯಾಚಾರ ಮಾಡಲಾಗಿದೆ. ಮೃತ ದೇಹವನ್ನು ಬೀದಿ ನಾಯಿಗಳು ಮತ್ತು ಇಲಿಗಳು ಕಚ್ಚಿ ತಿಂದಿದ್ದು, ಪ್ರಮುಖ ಅಂಗಾಗಗಳೇ ನಾಪತ್ತೆಯಾಗಿವೆ ಎಂದು ಮರಣೋತ್ತರ ಪರೀಕ್ಷೆ ನಡೆಸಿದ ಎಸ್‌ಕೆ ದತ್ತರ್ ವಾಲ್ ಅವರು ಹೇಳಿದ್ದಾರೆ.

ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಈ ಸಂಬಂಧ 8 ಮಂದಿಯನ್ನು ವಶಕ್ಕೆ ತೆಗೆದುಕೊಂಡಿದ್ದು, ನಾಪತ್ತೆಯಾಗಿರುವ ಮತ್ತೋರ್ವ ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ. ಮೂಲಗಳ ಪ್ರಕಾರ ಬಂಧಿತ ಎಲ್ಲಾ 8 ಆರೋಪಿಗಳು ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದು, ಯುವತಿಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿರುವುದಾಗಿ ಹೇಳಿದ್ದಾರೆ. ಈ ಎಲ್ಲ ವಿದ್ಯಮಾನಗಳಿಂದ ವಿಚಲಿತರಾಗಿರುವ ಮೃತ ಯುವತಿಯ ತಂಗಿ 'ಅತ್ಯಾಚಾರಿಗಳನ್ನು ಗಲ್ಲಿಗೇರಿಸಿ' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ಮೃತರ ಸಂಖ್ಯೆ 165ಕ್ಕೆ ಏರಿಕೆ; ನಾಪತ್ತೆಯಾದವರಲ್ಲಿ 133 ಮಂದಿ ಭಾರತೀಯರು

Iran ಸರ್ವೋಚ್ಚ ನಾಯಕ Mojtaba Khamenei ಸತ್ತಿಲ್ಲ, ಗಂಭೀರವಾಗಿ ಗಾಯಗೊಂಡಿದ್ದಾರೆ: ಹಳೇ Vidoe ಬಿಡುಗಡೆ ಬೆನ್ನಲ್ಲೇ ಅಸಲಿಯತ್ತು ಬಿಚ್ಚಿಟ್ಟ Donald Trump..!

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ