ಬಿಹಾರ ಮಾಜಿ ಸಿಎಂ ನಿತೀಶ್ ಕುಮಾರ್ ಮತ್ತು ಹಾಲಿ ಸಿಎಂ ಮಾಂಝಿ (ಸಂಗ್ರಹ ಚಿತ್ರ) 
ದೇಶ

ನಿತೀಶ್ ಆಯ್ಕೆಗೆ ಪಾಟ್ನಾ 'ಹೈ' ತಡೆ

ಮತ್ತೆ ಬಿಹಾರದ ಗದ್ದುಗೆ ಏರಲು ಹವಣಿಸುತ್ತಿರುವ ಮಾಜಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ತೀವ್ರ ಹಿನ್ನಡೆಯಾಗಿದ್ದು...

ಪಾಟ್ನಾ: ಮತ್ತೆ ಬಿಹಾರದ ಗದ್ದುಗೆ ಏರಲು ಹವಣಿಸುತ್ತಿರುವ ಮಾಜಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ತೀವ್ರ ಹಿನ್ನಡೆಯಾಗಿದ್ದು, ಜೆಡಿಯು ಶಾಸಕಾಂಗ ಪಕ್ಷದ ನಾಯಕರಾಗಿ ನಿತೀಶ್ ಆಯ್ಕೆಗೆ ಪಾಟ್ನಾ ಹೈಕೋರ್ಟ್ ತಡೆ ನೀಡಿದೆ.

ನಿತೀಶ್ ಆಯ್ಕೆಯೇ ಅಸಾಂವಿಧಾನಿಕ ಎಂದು ಪಾಟ್ನಾ ಹೈಕೋರ್ಟ್ ಆದೇಶಿಸಿದ್ದು, ನಿತೀಶ್ ಆಯ್ಕೆಯನ್ನು ಸಿಂಧುಗೊಳಿಸಿದ ಸ್ಪೀಕರ್ ಕ್ರಮವನ್ನು ಕೂಡ ಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ. ಜೆಡಿಯು ಶಾಸಕ ರಾಜೇಶ್ವರ ರಾಜ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಂಡ ನ್ಯಾಯಾಲಯ ಈ ವಿಚಾರದಲ್ಲಿ ರಾಜ್ಯಾಪಾಲರ ನಿರ್ಧಾರವೇ ಅಂತಿಮ ಎಂದು ತೀರ್ಪು ನೀಡಿದೆ.

ನಿತೀಶ್ ಕುಮಾರ್ ಅವರು ಸೋಮವಾರ ಜೆಡಿಯು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿ ಬಿಹಾರ ರಾಜ್ಯಪಾಲ ಕೇಸರಿ ನಾಥ್ ತ್ರಿಪಾಠಿ ಅವರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದರು. ಆದರೆ ಇಂದು ಪಾಟ್ನಾ ಹೈಕೋರ್ಟ್ ನೀಡಿದ ಆದೇಶದಿಂದಾಗಿ ಮಾಜಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ತೀವ್ರ ಹಿನ್ನಡೆಯಾಗಿದೆ.

ತಮಗೆ 130 ಶಾಸಕರ ಬೆಂಬಲವಿದೆ ಎಂದು ಪ್ರತಿಪಾದಿಸಿದ್ದ ನಿತೀಶ್ ಕುಮಾರ್, ಎಲ್ಲ ಶಾಸಕರನ್ನು ರಾಜಭವನದಲ್ಲಿ ಪೆರೇಡ್ ಮಾಡಿಸಿದ್ದರು ಮತ್ತು ಬಹುಮತ ಸಾಬೀತಿಗೆ ತಮಗೆ ಅವಕಾಶ ನೀಡಬೇಕು ಎಂದು ರಾಜ್ಯಪಾಲರನ್ನು ಒತ್ತಾಯಿಸಿದ್ದರು. ಇದಕ್ಕೂ ಮೊದಲು ಹಾಲಿ ಮುಖ್ಯಮಂತ್ರಿ ಮಾಂಝಿ ಕೂಡ ಸೋಮವಾರ ರಾಜ್ಯಪಾಲರನ್ನು ಭೇಟಿಮಾಡಿ ಬಹುಮತ ಸಾಬೀತಿಗೆ ತಮಗೆ ಅವಕಾಶ ನೀಡಬೇಕೆಂದು ಕೋರಿದ್ದರು.

ಹೀಗಾಗಿ ಪ್ರಸ್ತುತ ಚೆಂಡು ರಾಜ್ಯಪಾಲರ ಅಂಗಳದಲ್ಲಿದ್ದು, ರಾಜ್ಯಪಾಲರು ಯಾವ ನಿರ್ಧಾರ ಕೈಗೊಳ್ಳಲ್ಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

ಜೆಡಿಯು ಪಕ್ಷವನ್ನು ​ಬಿಜೆಪಿ ಒಡೆಯಲು ಯತ್ನಿಸುತ್ತಿದೆ
ಕೇಂದ್ರ ಬಿಜೆಪಿ ಸರ್ಕಾರ ಜೆಡಿಯು ಪಕ್ಷದಲ್ಲಿ ಒಡಕನ್ನುಂಟು ಮಾಡಿ ಬಿಹಾರದಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಿಸಲು ಪ್ರಯತ್ನಿಸುತ್ತಿದೆ ಎಂದು  ಜೆಡಿಯು ನಾಯಕ ನಿತೀಶ್ ಕುಮಾರ್ ಆರೋಪಿಸಿದ್ದಾರೆ.

ರಾಷ್ಟ್ರಪತಿ ಪ್ರಣವ್ ಮುಖರ್ಜಿಯವರ ಭೇಟಿಯ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಿತೀಶ್ ಕುಮಾರ್ ಅವರು, ಬಿಹಾರದಲ್ಲಿ ಸರ್ಕಾರ ರಚಿಸಲು 130 ಶಾಸಕರ ಬೆಂಬಲವಿದ್ದರೂ ರಾಜ್ಯಪಾಲ ಕೇಸರಿನಾಥ್ ತ್ರಿಪಾಠಿ ಬಹುಮತ ಸಾಬೀತು ಪಡಿಸಲು ಅವಕಾಶ ನೀಡುತ್ತಿಲ್ಲ. ಬಿಹಾರ ರಾಜಕೀಯ ಬಿಕ್ಕಟ್ಟಿನ ಹಿಂದೆ ಬಿಜೆಪಿ ಕೈವಾಡವಿದ್ದು, ಬಿಜೆಪಿ ಜೆಡಿಯು ಪಕ್ಷವನ್ನು ಒಡೆಯಲೆತ್ನಿಸುತ್ತಿದೆ ಎಂದು ಆರೋಪಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Delhi CJP Protest: ಖ್ಯಾತ ಯೂಟ್ಯೂಬರ್ ಧ್ರುವ್ ರಾಠಿ ಸೇರಿ 150ಕ್ಕೂ ಹೆಚ್ಚು ಮಂದಿ ಪೊಲೀಸ್ ವಶ; Video

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ನವೆಂಬರ್‌ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?; ಹೊಸ ಮುಖಗಳಿಗೆ ಮಣೆ!

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!