ದೇಶ

ತೀಸ್ತಾ ಪ್ರಕರಣ: ಅರ್ಜಿ ತಿರಸ್ಕರಿಸಿದ ಹೈಕೋರ್ಟ್

ಅಹಮದಾಬಾದ್: ಗುಲ್ಬರ್ಗ್ ಸೊಸೈಟಿಯ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆತಲ್ವಾಡ್ ಮತ್ತು ಅವರ ಪತಿ ಜಾವೇದ್ ಆನಂದ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಗುಜರಾತ್ ಹೈಕೋರ್ಟ್ ಗುರುವಾರ ತಿರಸ್ಕರಿಸಿದೆ.

ಸಾಮಾಜಿಕ ಹೋರಾಟಗಾರ್ತಿ ತೀಸ್ತಾ ಸೆತಲ್ವಾಡ್, ಪತಿ ಜಾವೇದ್ ಆನಂದ್ ಅವರು ಗೋದ್ರೋತ್ತರ ಹಿಂಸೆಗೆ ಸಾಕ್ಷಿಯಾಗಿದ್ದ ಗುಲ್ಬರ್ಗ್ ಸೊಸೈಟಿಯನ್ನು ವಸ್ತು ಸಂಗ್ರಹಾಲಯವನ್ನಾಗಿ ಪರಿವರ್ತಿಸಲು ಸಂಗ್ರಹಿಸಿದ್ದ ಹಣವನ್ನು ದುರುಪಯೋಗಪಡಿಸಿಕೊಂಡಿದ್ದರು ಎಂಬ ಆರೋಪದ ಮೇಲೆ ಇವರ ವಿರದ್ಧ ಪ್ರಕರಣ ದಾಖಲಾಗಿತ್ತು.

ಗುಲ್ಬರ್ಗ್ ಸೊಸೈಟಿಯಲ್ಲಿ ಸಂತ್ರಸ್ತರ ಮನೆ ಪುನರ್ ನಿರ್ಮಾಣಕ್ಕೆ ನೆರವು ನೀಡಲು ಹಾಗೂ ಮ್ಯೂಸಿಯಂ ನಿರ್ಮಿಸಲು ತೀಸ್ತಾ ಮತ್ತಿತರರು 1.5 ಕೋಟಿ ದೇಣಿಗೆ ಸಂಗ್ರಹಿಸಿದ್ದರು. ಆದರೆ, ಅವರು ಈ ಹಣವನ್ನು ಸದುಪಯೋಗಪಡಿಸಿಕೊಳ್ಳದೆ ಸೆಟಲ್ವಾಡ್ ಅವರ ನಿಶ್ಚಿತ ಠೇವಣಿ ಖಾತೆಯಲ್ಲಿ ಹಾಕಿಕೊಂಡಿದ್ದರು ಎಂಬ ಆರೋಪವಿದೆ.ಈ ಆರೋಪದ ವಿರುದ್ಧ ಸೆತಲ್ವಾಡ್ ಮತ್ತಿತರರಿಗೆ ಗುಲ್ಬರ್ಗ್ ಸೊಸೈಟಿಯ 12 ಮಂದಿಗೆ ನೋಟಿಸ್ ನೀಡಿದ್ದರು. ಈ ಹಿಂದೆ ನಿರೀಕ್ಷಣಾ ಜಾಮೀನು ಕೋರಿ ತೀಸ್ತಾ ದಂಪತಿ ಸಲ್ಲಿಸಿದ್ದ ಅರ್ಜಿಯನ್ನು 2014ರ ಮಾರ್ಚ್ 25ರಂದು ಸೆಷನ್ಸ್ ನ್ಯಾಯಾಲಯ ತಿರಸ್ಕರಿತ್ತು.

SCROLL FOR NEXT