ಜಮ್ಮು/ನವದೆಹಲಿ: ಜಮ್ಮು ಮತ್ತು ಕಾಶ್ಮೀರ ದಲ್ಲಿ ಸರ್ಕಾರ ರಚನೆ ಬಿಕ್ಕಟ್ಟು ಕೊನೆಗೂ ಪರಿಹಾರವಾಗಿದೆ. ಕೇಂದ್ರ ಬಜೆಟ್ ಅಧಿವೇಶ ನ ಆರಂಭಕ್ಕೂ ಮೊದಲು ಕಾಶ್ಮೀರ ಕಣಿವೆ ಯಲ್ಲಿ ಮುಫ್ತಿ ಮಹಮ್ಮದ್ ಸಯೀದ್ ನೇತೃತ್ವ ದಲ್ಲಿ ಪಿಡಿಪಿ ಬಿಜೆಪಿ ಮೈತ್ರಿಕೂಟದ ಸರ್ಕಾರ ಅಧಿಕಾರಕ್ಕೆ ಬರಲಿದೆ. ಬಿಜೆಪಿಯ ನಿರ್ಮಲ್ ಸಿಂಗ್ ಉಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಮೂಲಗಳ ಪ್ರಕಾರ,ಫೆ .23ರೊಳಗೆ ಈ ಕುರಿತ ಅಧಿಕೃತ ಘೋಷಣೆ ಹೊರಬೀಳಲಿದೆ. ಕಳೆದ ವರ್ಷ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಸ್ಪಷ್ಟಬಹುಮತ ಸಿಗದ ಹಿನ್ನೆಲೆಯಲ್ಲಿ ಸರ್ಕಾರ ರಚನೆ ಕಗ್ಗಂಟಾಗಿ ಪರಿಣಮಿಸಿತ್ತು. ಪಿಡಿಪಿ ಬಿಜೆಪಿ ಸರ್ಕಾರ ರಚನೆ ಗಾಗಿ ಇನ್ನಷ್ಟು ಕಾಲಾವಕಾಶ ಕೋರಿದ ಹಿನ್ನೆಲೆಯಲ್ಲಿ ರಾಜ್ಯಪಾಲರು ಜ.9ರಂದು ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸು ಮಾಡಿದ್ದರು. ಅದರಂತೆ ಜ.9ರಂದು ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಲ್ಲಿದೆ.