ಅರವಿಂದ್ ಕೇಜ್ರಿವಾಲ್ ಮತ್ತು ಸಂಪುಟ ಸಹೋದ್ಯೋಗಿಗಳು 
ದೇಶ

ಕೇಜ್ರಿವಾಲ್ ಸಂಪುಟ ಸದಸ್ಯರಿಗೆ ಖಾತೆ ಹಂಚಿಕೆ, ದೆಹಲಿ ಸಿಎಂ ಬಳಿ ಇಲ್ಲ ಯಾವುದೇ ಖಾತೆ

ದೆಹಲಿಯ 8ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಅರವಿಂದ್ ಕೇಜ್ರಿವಾಲ್ ಅವರು ಶನಿವಾರ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಎಲ್ಲಾ ಖಾತೆಗಳನ್ನು ಹಂಚಿಕೆ ಮಾಡಿದ್ದಾರೆ.

ನವದೆಹಲಿ: ದೆಹಲಿಯ 8ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಅರವಿಂದ್ ಕೇಜ್ರಿವಾಲ್ ಅವರು ಶನಿವಾರ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಎಲ್ಲಾ ಖಾತೆಗಳನ್ನು ಹಂಚಿಕೆ ಮಾಡಿದ್ದಾರೆ.

ಈ ಕುರಿತು ಇಂದು ಮಧ್ಯಾಹ್ನ ಸುದ್ದಿಗೋಷ್ಠಿ ನಡೆಸಿದ ದೆಹಲಿಯ ಮೊದಲ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು, ಕೇಜ್ರಿವಾಲ್ ಅವರು ತಮ್ಮ ಬಳಿ ಯಾವುದೇ ಖಾತೆಗಳನ್ನು ಇಟ್ಟುಕೊಳ್ಳದೇ ಎಲ್ಲಾ ಖಾತೆಗಳನ್ನು ಸಂಪುಟ ಸಹೋದ್ಯೋಗಿಗಳಿಗೆ ಹಂಚಿಕೆ ಮಾಡಿದ್ದು, ಅವರು ಎಲ್ಲಾ ಸಚಿವರ ಖಾತೆಗಳ ಮೇಲ್ವಿಚಾರಣೆ ನಡೆಸಲಿದ್ದಾರೆ ಎಂದು ತಿಳಿಸಿದರು.

ಕೇಜ್ರಿವಾಲ್ ಅವರೊಂದಿಗೆ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಆರು ಸಚಿವರು 40 ವರ್ಷದೊಳಗಿನವರಾದ್ದು, ದೇಶದ ಯುವ ಸಂಪುಟ ಎಂದು ಕರೆಯಿಸಿಕೊಳ್ಳುವ ಸಾಧ್ಯತೆ ಇದೆ.

ಆಮ್ ಆದ್ಮಿ ಸರ್ಕಾರ
1. ಅರವಿಂದ್ ಕೇಜ್ರಿವಾಲ್ - ಮುಖ್ಯಮಂತ್ರಿ
2. ಮನಿಶ್ ಸಿಸೋಡಿಯಾ- ಉಪ ಮುಖ್ಯಮಂತ್ರಿ, ಹಣಕಾಸು, ನಗರಾಭಿವೃದ್ಧಿ, ಶಿಕ್ಷಣ ಮತ್ತು ಗುಪ್ತಚರ
3. ಜಿತೇಂದ್ರ ಸಿಂಗ್ ತೊಮರ್ - ಗೃಹ ಮತ್ತು ಕಾನೂನು, ಕಲೆ ಮತ್ತು ಸಂಸ್ಕೃತಿ
4. ಸತ್ಯೇಂದ್ರ ಜೈನ್ - ಆರೋಗ್ಯ, ಇಂಧನ, ಲೋಕೋಪಯೋಗಿ, ಕೈಗಾರಿಕೆ
5. ಸಂದೀಪ್ ಕುಮಾರ್ - ಮಹಿಳಾ ಮತ್ತು ಮಕ್ಕಳ ಕಲ್ಯಾಣ
6. ಗೋಪಾಲ್ ರೈ - ಸಾರಿಗೆ ಮತ್ತು ಕಾರ್ಮಿಕ, ಉದ್ಯೋಗ ಖಾತೆ
7. ಆಸಿಮ್ ಅಹ್ಮದ್ ಖಾನ್ - ಆಹಾರ, ನಾಗರಿಕ ಪೂರೈಕೆ, ಪರಿಸರ ಮತ್ತು ಅರಣ್ಯ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚು.ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಬೆಂಗಳೂರಿನಲ್ಲಿ 5 ಪ್ರತ್ಯೇಕ ಕಮಿಷನರೇಟ್‌ ಸ್ಥಾಪನೆ; 1,022 ಹೊಸ ಹುದ್ದೆ ಸೃಷ್ಟಿಗೆ ಸಚಿವ ಸಂಪುಟ ಅಸ್ತು

ಹಬ್ಬಗಳ ಹೊತ್ತಲ್ಲೆ ಕಾಂಗ್ರೆಸ್‌ನಿಂದ ಜನತೆಗೆ ಮತ್ತೊಂದು ಶಾಕ್: Nandini ಹಾಲಿನ ದರ ಲೀಟರ್‌ಗೆ 8 ರೂ. ಏರಿಕೆಗೆ ಸಂಪುಟ ಸಮ್ಮತಿ!

ನೈಸ್ ಯೋಜನೆ ನನ್ನ ಕೂಸಾದರೆ, ಸೂಲಗಿತ್ತಿ ಯಾರು? ನನ್ನ ಕಿಡ್ನಿಗೆ ಸಮಸ್ಯೆ ಇರಬಹುದು, ಬ್ರೇನ್‌ಗೆ ಅಲ್ಲ: ಕಾಂಗ್ರೆಸ್ ವಿರುದ್ಧ ಗುಡುಗಿದ ದೇವೇಗೌಡ