ನವದೆಹಲಿ: ಕಳೆದ ಆರು ತಿಂಗಳಿಂದ ಗಣನೀಯ ಇಳಿಕೆ ಕಂಡಿದ್ದ ಪೆಟ್ರೋಲ್, ಡೀಸೆಲ್ ಬೆಲೆ ದಿಢೀರ್ ಏರಿಕೆಯಾಗಿದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಛಾ ತೈಲ ಬೆಲೆ ಏರಿಕೆಯಾದ ಹಿನ್ನೆಲೆಯಲ್ಲಿ ಪೆಟ್ರೋಲ್ ಪ್ರತಿ ಲೀಟರ್ಗೆ 82 ಪೈಸೆ ಹಾಗೂ ಡೀಸೆಲ್ ಪ್ರತಿ ಲೀಟರ್ ಗೆ 61 ಪೈಸೆ ಹೆಚ್ಚಳ ಮಾಡಲಾಗಿದ್ದು, ಈ ಪರಿಷ್ಕೃತ ದರ ಇಂದು ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ.