ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಜೆಡಿಯುನಿಂದ ಏಳು ಸಚಿವರ ಅಮಾನತು

ಬಿಹಾರ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದ್ದು, ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ಬೆಂಬಲಿತ ಏಳು ಸಚಿವರನ್ನು ಮಂಗಳವಾರ ಜೆಡಿಯು ಸದಸ್ಯತ್ವದಿಂದ...

ಜಿತನ್ ರಾಮ್ ಮಾಂಝಿ
Updated On : 18 Feb 2015, 10:14 am

ಪಟನಾ: ಬಿಹಾರ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದ್ದು, ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ಬೆಂಬಲಿತ ಏಳು ಸಚಿವರನ್ನು ಮಂಗಳವಾರ ಜೆಡಿಯು ಸದಸ್ಯತ್ವದಿಂದ ಅಮಾನತು ಮಾಡಿದೆ.

ಫೆ.20ರ ವಿಶ್ವಾಸ ಮತ ಯಾಚನೆಗೆ ಮೂರು ದಿನ ಮುಂಚೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಏಳು ಸಚಿವರಿಗೆ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡುವಂತೆ ಪಕ್ಷ ಸೂಚಿಸಿತ್ತು. ಆದರೆ, ಇದನ್ನು ನಿರಾಕರಿಸಿದ್ದ ಇವರು ಮಾಂಝಿ ಅವರನ್ನು ಬೆಂಬಲಿಸಿದ್ದರು. ಹೀಗಾಗಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಶರದ್ ಯಾದವ್  ಈ ನಿರ್ಣಯ ಕೈಗೊಂಡಿದ್ದಾರೆ.

ಈಗಾಗಲೇ 20 ಮಂದಿ ಸಚಿವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದು, ಪಕ್ಷೇತರ ಸಚಿವರೊಬ್ಬರು ಮಾತ್ರ ಈಗ ಉಳಿದುಕೊಂಡಿದ್ದಾರೆ. ಆದರೆ, ಈ ಅಮಾನತುಗೊಂಡವರಲ್ಲಿ ಮೂವರು ಸಚಿವರು ಶುಕ್ರವಾರ ನಡೆಯಲಿರುವ ಬಹುಮತ ಸಾಬೀತು ವೇಳೆ ಮತ ಚಲಾಯಿಸಬಹುದಾಗಿದೆ. ವಿಧಾನ ಪರಿಷತ್‍ನ ಮೂವರು ನಾಲ್ವರು ಸದಸ್ಯರಿಗೆ ಮತ ಚಲಾವಣೆ ಹಕ್ಕಿಲ್ಲ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments