ಜಿತನ್ ಮಾಂಝಿಗೆ ಬಿಜೆಪಿ ಬೆಂಬಲ
ಬಿಹಾರ ವಿಧಾನಸಭೆಯಲ್ಲಿ ಫೆ.20ರಂದು ವಿಶ್ವಾಸಮತ ಕೋರಲಿರುವ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ..
ಪಟನಾ: ಬಿಹಾರ ವಿಧಾನಸಭೆಯಲ್ಲಿ ಫೆ.20ರಂದು ವಿಶ್ವಾಸಮತ ಕೋರಲಿರುವ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ಅವರನ್ನು ಬೆಂಬಲಿಸುವುದಾಗಿ ಬಿಜೆಪಿ ಘೋಷಿಸಿದೆ.
ಮಾಂಝಿಗೆ ಬೆಂಬಲ ನೀಡುವ ಕುರಿತು ಇದುವರೆಗೆ ಗೊಂದಲದ ಹೇಳಿಕೆ ನೀಡುತ್ತಿದ್ದ ಬಿಜೆಪಿ, ಕೊನೆಗೂ ತನ್ನ ನಿಲವು ಸ್ಪಷ್ಟಪಡಿಸಿದೆ. ಬುಧವಾರ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾಂಝಿ ಪರ ಮತ ಚಲಾಯಿಸುವ ತೀರ್ಮಾನ ತೆಗೆದುಕೊಳ್ಳಲಾಗಿದೆ. ಇನ್ನು ವಿಶ್ವಾಸ ಮತ ಯಾಚನೆ ವೇಳೆ ಪ್ರತಿಪಕ್ಷ ಸಾಲಿನಲ್ಲಿ ಯಾವ ಪಕ್ಷ ಕೂರಬೇಕು ಎಂಬ ಜಿಜ್ಞಾಸೆ ಎದುರಾಗಿದೆ. ಈ ಸಾಲಿನಲ್ಲಿ ಜೆಡಿಯು ಸದಸ್ಯರು ಕೂರುತ್ತಾರೆಯೇ ಬಿಜೆಪಿ ಸದಸ್ಯರು ಕೂರುತ್ತಾರೆಯೇ ಎಂಬ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ.
ಕೋರ್ಟ್ ಷರತ್ತು
ನಿಮ್ಮ ಸರ್ಕಾರದಿಂದ ಯಾವುದೇ ನಿರ್ಧಾರ ಹಾಗೂ ಹೊಸ ನೀತಿಗಳನ್ನು ಜಾರಿಗೆ ತರಬಹುದು ಎಂದು ಬಿಹಾರ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿಗೆ ಪಟನಾ ಹೈಕೋರ್ಟ್ ಸೂಚನೆ ನೀಡಿದೆ. ಆದರೆ, ಇವುಗಳ ಅನುಷ್ಠಾನಕ್ಕೆ ಸಂಪೂರ್ಣ ಬಹುಮತ ಹೊಂದಿರಬೇಕು ಎಂಬ ಷರತ್ತನ್ನು ವಿಧಿಸಿದೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.