ಮಣಿಪುರದಲ್ಲಿ ಬಾಂಬ್ ಸ್ಫೋಟ: 7 ಜನರಿಗೆ ಗಾಯ
ಮಾರುಕಟ್ಟೆಯಲ್ಲಿ ಬಾಂಬ್ ಸ್ಫೋಟಗೊಂಡ ಪರಿಣಾಮ ಮೂವರು ಪೊಲೀಸರು ಸೇರಿ ನಾಲ್ವರು ನಾಗರಿಕರು...
ಇಂಫಾಲ್: ಮಾರುಕಟ್ಟೆಯಲ್ಲಿ ಬಾಂಬ್ ಸ್ಫೋಟಗೊಂಡ ಪರಿಣಾಮ ಮೂವರು ಪೊಲೀಸರು ಸೇರಿ ನಾಲ್ವರು ನಾಗರಿಕರು ಗಾಯಗೊಂಡಿರುವ ಘಟನೆ ನಿನ್ನೆ ರಾತ್ರಿ ಮಣಿಪುರದ ಮಾರುಕಟ್ಟೆಯಲ್ಲಿ ನಡೆಸಿದೆ.
ಮಣಿಪುರದ ಸಮು ಮಖೋಂಗ್ ಪ್ರದೇಶದಲ್ಲಿರುವ ಮಾರುಕಟ್ಟೆಯಲ್ಲಿ ಬಾಂಬ್ ಇರಿಸಲಾಗಿದೆ ಎಂದು ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಈ ವೇಳೆ ತಪಾಸಣೆ ನಡೆಸಿದಾಗ, ಬಾಂಬ್ ಇರುವಂತಹ ಬ್ಯಾಗ್ವೊಂದು ಪತ್ತೆಯಾಗಿದೆ.
ಅದನ್ನು ತೆಗೆದ ಪೇದೆ ಎಸೆಯಲು ಮುಂದಾಗಿದ್ದಾರೆ, ಆ ಸಂದರ್ಭದಲ್ಲಿ ಬಾಂಬ್ ಸ್ಫೋಟಗೊಂಡಿದ್ದು, ಪೊಲೀಸರು ಸೇರಿದಂತೆ ಮೂವರು ನಾಗರಿಕರು ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.