ಇಂದು ಬಿಹಾರ ಸಿಎಂ ಆಗಿ ನಿತೀಶ್ ಪ್ರಮಾಣ
ಬಿಹಾರ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಭಾನುವಾರ ಸಂಜೆ 5 ಗಂಟೆಗೆ ನಾಲ್ಕನೇ ಬಾರಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ...
ಪಟನಾ: ಬಿಹಾರ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಭಾನುವಾರ ಸಂಜೆ 5 ಗಂಟೆಗೆ ನಾಲ್ಕನೇ ಬಾರಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಜೆಡಿಯು ನಿರ್ಧಾರದ ವಿರುದ್ಧ ಬಂಡೆದ್ದಿದ್ದ ಜಿತನ್ ರಾಂ ಮಾಂಜಿ ಅವರು ವಿಶ್ವಾಸಮತ ಸಾಬೀತಿಗೂ ಮೊದಲೇ ಸೋಲೊಪ್ಪಿಕೊಂಡು ರಾಜಿನಾಮೆ ನೀಡಿದ್ದರು. ನಿತೀಶ್ ತಮ್ಮ ಜತೆ ಯಾರ್ಯಾರು ಮಂತ್ರಿಗಳಾಗಿ ಪ್ರಮಾಣ ಸ್ವೀಕರಿಸಲಿದ್ದಾರೆ ಎಂಬ ಪಟ್ಟಿ ಸಿದ್ಧ ಪಡಿಸಿಕೊಂಡಿದ್ದಾರೆ.
ಸದ್ಯಕ್ಕೆ ಜೆಡಿಯುಗೆ ಬಾಹ್ಯಬೆಂಬಲ ನೀಡಿರುವ ಆರ್ ಜೆಡಿ(24 ಸದಸ್ಯರು), ಕಾಂಗ್ರೆಸ್-(5, ಸಿಪಿಐ(1) ಹಾಗೂ ಸ್ವತಂತ್ರ(1) ಶಾಸಕರು ಸರ್ಕಾರದ ಭಾಗವಾಗಲಿದ್ದಾರೆಯೇ ಎನ್ನುವುದು ಇನ್ನೂ ಸ್ಪಷ್ಟವಾಗಿಲ್ಲ. ಸರ್ಕಾರದ ಭಾಗವಾಗಬೇಕೇ, ಬೇಡವೇ ಎನ್ನುವುದನ್ನು ನಿತೀಶ್ ಸದನದಲ್ಲಿ ಬಹುಮತ ಸಾಬೀತುಪಡಿಸಿದ ಬಳಿಕ ನಿರ್ಧರಿಸಲಾಗುವುದು ಎಂದು ಕಾಂಗ್ರೆಸ್ ಹೇಳಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.