ನವದೆಹಲಿ: ಬಜೆಟ್ ಅಧಿವೇಶನ ಹಿನ್ನೆಲೆ ಕೇಂದ್ರ ಸಚಿವ ವೆಂಕಯ್ಯನಾಯ್ಡು ಭಾನುವಾರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಅಧಿವೇಶನದಲ್ಲಿ ಕೇಂದ್ರ ಮಂಡಿಸುವ ಬಜೆಟ್‌ಗೆ ಸಹಕಾರ ನೀಡುವಂತೆ ಕೋರಿ ಹಾಗೂ ಇನ್ನಿತರ ವಿಷಯಗಳ ಕುರಿತು ವೆಂಕಯ್ಯ ನಾಯ್ಡು ಸೋನಿಯಾ ಗಾಂಧಿ ಅವರೊಂದಿಗೆ ಚರ್ಚಿಸಿದ್ದಾರೆ.
ಕೇಂದ್ರ ಬಜೆಟ್ ಮಂಡನೆಗೆ ಹಾಗೂ ಕೆಲವು ಕಾಯ್ದೆ ಜಾರಿಗೆ ವಿರೋಧ ಪಕ್ಷಗಳ ಬೆಂಬಲ ಬೇಕಾಗಿದ್ದು, ಅದಕ್ಕಾಗಿ ಸಹಕಾರ ನೀಡುವಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಮನವಿ ಮಾಡಲಾಗಿದೆ ಎಂದು ವೆಂಕಯ್ಯನಾಯ್ಡು ತಿಳಿಸಿದ್ದಾರೆ.
ಬಜೆಟ್ ಅಧಿವೇಶನ ಹಿನ್ನಲೆಯಲ್ಲಿ ಇಂದು ಸರ್ವಪಕ್ಷ ಸಭೆ ನಡೆಸಲಾಗುವುದು ಎಂದಿರುವ ವೆಂಕಯ್ಯ ನಾಯ್ಡು, ವಿರೋಧ ಪಕ್ಷಗಳೊಂದಿಗೆ ಚರ್ಚೆ ನಡೆಸಿ, ವಿವಾದಗಳನ್ನು ಬಗೆಹರಿಸುವತ್ತ ಕೇಂದ್ರ ಪ್ರಯತ್ನಿಸುತ್ತಿದೆ. ಬಜೆಟ್ ಆರಂಭದಲ್ಲೇ ಯಾವುದೇ ರೀತಿಯ ತೊಂದರೆಗಳು ಆಗಬಾರದು ಎಂಬ ನಿಟ್ಟಿನಲ್ಲಿ ವಿರೋಧ ಪಕ್ಷಗಳ ಸಹಕಾರವನ್ನು ಕೇಂದ್ರ ಸರ್ಕಾರ ನಿರೀಕ್ಷಿಸುತ್ತಿದೆ. ಅಲ್ಲದೇ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸರ್ವಪಕ್ಷ ಸಭೆ ನಡೆಯಲಿದೆ ಎಂದು ಅವರು ಹೇಳಿದ್ದಾರೆ.