ದೇಶ

ಲೋಕಸಭೆಯಲ್ಲಿ ಭೂ ಸ್ವಾಧೀನ ಮಸೂದೆ ಮಂಡನೆ: ಸದನದಿಂದ ಹೊರ ನಡೆದ ಕಾಂಗ್ರೆಸ್

Lingaraj Badiger

ನವದೆಹಲಿ: ಪ್ರತಿಪಕ್ಷಗಳ ತೀವ್ರ ವಿರೋಧದ ನಡೆವೆಯೂ ವಿವಾದಾತ್ಮಕ ಭೂ ಸ್ವಾಧೀನ ಮಸೂದೆಯನ್ನು ಎನ್‌ಡಿಎ ಸರ್ಕಾರ ಮಂಗಳವಾರ ಲೋಕಸಭೆಯಲ್ಲಿ ಮಂಡಿಸಿದೆ.

ಉದ್ದೇಶಿತ ಮಸೂದೆಗೆ ತಿದ್ದುಪಡಿ ತರಬೇಕು ಎಂದು ಒತ್ತಾಯಿಸಿ ಪ್ರತಿಪಕ್ಷ ಕಾಂಗ್ರೆಸ್ ಧರಣಿ ನಡೆಸಿತು. ಅಲ್ಲದೆ ಭೂಸ್ವಾಧೀನ ಮಸೂದೆಯನ್ನು ವಿರೋಧಿಸಿ ಸದನದಿಂದ ನಡೆಯಿತು.

ಮಸೂದೆ ಮಂಡಿಸಿದ ಗ್ರಾಮೀಣಾಭಿವೃದ್ಧಿ ಸಚಿವ ಬಿರೇಂದ್ರ ಸಿಂಗ್ ಅವರು, ಭೂಸ್ವಾಧೀನ ಮಸೂದೆಗೆ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಆದರೆ ಈ ಕುರಿತು ಚರ್ಚಿಸಲಾಗುವುದು ಎಂದು ಹೇಳಿದ್ದಾರೆ.

ನಮ್ಮ ವಿರೋಧದ ನಡುವೆಯೂ ಸರ್ಕಾರ ಮಸೂದೆಯನ್ನು ಮಂಡಿಸಿರುವುದು ಸರಿಯಾದ ಕ್ರಮ ಅಲ್ಲ ಎಂದು ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರು ಹೇಳಿದ್ದಾರೆ. ಅಲ್ಲದೆ ಭೂ ಸ್ವಾಧೀನ ಮಸೂದೆಯನ್ನು ಸ್ಥಾಯಿ ಸಮಿತಿ ಅಥವಾ ಆಯ್ಕೆ ಸಮಿತಿಗೆ ಕಳುಹಿಸಬಾರದು ಎಂದು ಒತ್ತಾಯಿಸಿದ್ದಾರೆ.

ತೃಣಮೂಲ ಕಾಂಗ್ರೆಸ್ ಸಹ ಮಸೂದೆಯನ್ನು ತೀವ್ರವಾಗಿ ವಿರೋಧಿಸಿದ್ದು, ನಮ್ಮ ಪಕ್ಷ ಭೂಸ್ವಾಧೀನ ಮಸೂದೆಯನ್ನು ವಿರೋಧಿಸುತ್ತದೆ ಮತ್ತು ಇದೊಂದು ರೈತ ವಿರೋಧಿ ಮಸೂದೆ ಎಂದು ಟಿಎಂಸಿ ಸಂದ ಸೌಗತ್ ರಾಯ್ ಅವರು ಹೇಳಿದ್ದಾರೆ.

SCROLL FOR NEXT