ಮೆಹಬೂಬಾ ಮುಫ್ತಿ-ಅಮಿತ್ ಶಾ 
ದೇಶ

ಶೀಘ್ರದಲ್ಲೇ ಜಮ್ಮು-ಕಾಶ್ಮೀರದಲ್ಲಿ ಮೈತ್ರಿ ಸರ್ಕಾರ ರಚನೆ: ಅಮಿತ್ ಶಾ

ಶೀಘ್ರದಲ್ಲೇ ಜಮ್ಮು ಕಾಶ್ಮೀರದಲ್ಲಿ ಉತ್ತಮ ಮೈತ್ರಿ ಸರ್ಕಾರ ರಚನೆಯಾಗಲಿದೆ ಎಂದು ಬಿಜೆಪಿ ಅಧ್ಯಕ್ಷ ಅಮಿತ್...

ನವದೆಹಲಿ: ಶೀಘ್ರದಲ್ಲೇ ಜಮ್ಮು ಕಾಶ್ಮೀರದಲ್ಲಿ ಉತ್ತಮ ಮೈತ್ರಿ ಸರ್ಕಾರ ರಚನೆಯಾಗಲಿದೆ ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಮಂಗಳವಾರ ಹೇಳಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ ಸರ್ಕಾರ ರಚನೆ ಕುರಿತು ಹಲವು ದಿನಗಳಿಂದ ಬಿಜೆಪಿ-ಪಿಡಿಪಿ ನಡುವೆ ನಡೆಯುತ್ತಿದ್ದ ಚರ್ಚೆ ಇಂದು ಅಂತ್ಯಗೊಂಡಿದ್ದು, ಸರ್ಕಾರ ರಚನೆಗೆ ಬಿಜೆಪಿ-ಪಿಡಿಪಿ ಒಪ್ಪಂದ ಮಾಡಿಕೊಂಡಿದೆ ಎಂದು ಮೂಲಗಳು ತಿಳಿಸಿವೆ.

ಸರ್ಕಾರ ರಚನೆ ಕುರಿತು ಪೀಪಲ್ಸ್ ಡೆಮ್ರಾಕ್ರಟಿಕ್ ಪಕ್ಷ(ಪಿಡಿಪಿ)ದ ನಾಯಕಿ ಮೆಹಬೂಬಾ ಮುಫ್ತಿ ಅವರು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿ ಮಾಡಿ ಅಂತಿಮ ಸುತ್ತಿನ ಮಾತುಕತೆ ನಡೆಸಿದ್ದಾರೆ.

ನಂತರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಮಿತ್ ಶಾ, ಹಲವು ಸುತ್ತಿನ ಮಾತುಕತೆ ನಂತರ ಉಭಯ ಪಕ್ಷಗಳು ಒಮ್ಮತಕ್ಕೆ ಬಂದಿದ್ದೇವೆ. ಶೀಘ್ರದಲ್ಲೇ ಜಮ್ಮು-ಕಾಶ್ಮೀರದಲ್ಲಿ ಉತ್ತಮ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬರಲಿದ್ದು, ಇಲ್ಲಿನ ಜನತೆಯ ಅಭಿವೃದ್ಧಿಗಾಗಿ ಸರ್ಕಾರ ದುಡಿಯಲಿದೆ. ಪ್ರಧಾನಿ ಮೋದಿ ಹಾಗೂ ಮುಫ್ತಿ ಸಯೀದ್ ಆದಷ್ಟು ಬೇಗ ಭೇಟಿಯಾಗಲಿದ್ದಾರೆ. ನಂತರ ಸರ್ಕಾರ ರಚನೆಯ ಅಧಿಕೃತ ಘೋಷಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ನಂತರ ಮಾತನಾಡಿದ ಮುಫ್ತಿ, ರಾಜ್ಯದಲ್ಲಿ ಶಾಂತಿ ಮತ್ತು ಏಕತೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಮೈತ್ರಿ ಸರ್ಕಾರ ರಚನೆಗೆ ಮುಂದಾಗಿದ್ದೇವೆ. ಉಭಯ ಪಕ್ಷಗಳೂ ಅಭಿವೃದ್ಧಿಪರ ಸರ್ಕಾರ ರಚನೆಗೆ ತೀರ್ಮಾನಿಸಿದ್ದು, ಜಮ್ಮು ಕಾಶ್ಮೀರಕ್ಕೆ ಸ್ವಚ್ಛ ಸರ್ಕಾರ ನೀಡುತ್ತೇವೆ ಎಂದು ಮೆಹಬೂಬಾ ಹೇಳಿದ್ದಾರೆ.


Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜಂತರ್ ಮಂತರ್‌'ಗೆ ಅಕ್ರಮ ಪ್ರವೇಶ ಆರೋಪ: ಮುನ್ನೆಚ್ಚರಿಕೆ ಕ್ರಮವಾಗಿ CJPಯ ರಂಕಾ, ದಾಸ್, ಶಿಂಧೆ ಬಂಧನ

‘ರಾಹುಲ್ ಗಾಂಧಿ ನನ್ನನ್ನು ಪಕ್ಕಕ್ಕೆ ತಳ್ಳಿಲ್ಲ,ಕಾಳಜಿ ವಹಿಸಿದರು, ಬಿಜೆಪಿಯವರಿಗೆ ನನ್ಮೇಲೆ ತುಂಬಾ ಪ್ರೀತಿ’: CM ಡಿ.ಕೆ. ಶಿವಕುಮಾರ್; Video

ಒಂದು ಕಾಣದ ಕಣದ ಹುಡುಕಾಟ (ವಿಜ್ಞಾನ ವಿಶೇಷ)

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!