'ಭೂ ಸ್ವಾಧೀನ ಕಾಯ್ದೆ' ಸುಗ್ರೀವಾಜ್ಞೆ ಹಿಂಪಡೆಯುವ ಪ್ರಶ್ನೆಯೇ ಇಲ್ಲ: ಮೋದಿ
'ಭೂ ಸ್ವಾಧೀನ ಕಾಯೆ ತಿದ್ದುಪಡಿ' ಸಂಬಂಧ ಸರ್ಕಾರ ಹೊರಡಿಸುವ ಸುಗ್ರೀವಾಜ್ಞೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಬಲವಾಗಿ ಸಮರ್ಥಿಸಿಕೊಂಡಿದ್ದು,...
ನವದೆಹಲಿ: 'ಭೂ ಸ್ವಾಧೀನ ಕಾಯೆ ತಿದ್ದುಪಡಿ' ಸಂಬಂಧ ಸರ್ಕಾರ ಹೊರಡಿಸುವ ಸುಗ್ರೀವಾಜ್ಞೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಬಲವಾಗಿ ಸಮರ್ಥಿಸಿಕೊಂಡಿದ್ದು, ಸುಗ್ರೀವಾಜ್ಞೆಯನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ ಎಂದು ಮಂಗಳವಾರ ಸ್ಪಷ್ಟಪಡಿಸಿದ್ದಾರೆ.
ಭೂಸ್ವಾಧೀನಕ್ಕೆ ಸಂಬಂಧಿಸಿ ಕೇಂದ್ರ ಸರ್ಕಾರ ಹೊರಡಿಸಿರುವ ಸುಗ್ರೀವಾಜ್ಞೆಗೆ ಒಂದೆಡೆ ಪ್ರತಿಪಕ್ಷಗಳಿಂದ ತೀವ್ರ ವಿರೋಧ ವ್ಯಕ್ತವಾದರೆ, ಮತ್ತೊಂದೆಡೆ ಗಾಂಧಿವಾದಿ ಅಣ್ಣಾ ಹಜಾರೆ ಅವರೂ ಇದರ ವಿರುದ್ಧ ಧ್ವನಿಯೆತ್ತಿ, ಮತ್ತೆ ಜಂತರ್ ಮಂತರ್ಗೆ ಧಾವಿಸಿದ್ದಾರೆ. ಇವೆಲ್ಲವೂ ಮೋದಿ ಸರ್ಕಾರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದ್ದು, ಈ ಹಿನ್ನೆಲೆಯಲ್ಲಿ ಇಂದು ಪ್ರಧಾನಿ ಮೋದಿ ಅವರು ಬಿಜೆಪಿ ಸಂಸದೀಯ ಮಂಡಳಿ ಸಭೆ ಕರೆದು ಚರ್ಚಿಸಿದರು.
ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮೋದಿ, ಭೂ ಸ್ವಾಧೀನ ಕಾಯ್ದೆಯಲ್ಲಿ ಯಾವುದೇ ದೋಷವಿಲ್ಲ. ಇದೊಂದು ಉತ್ತಮ ಕಾಯ್ದೆಯಾಗಿದ್ದು, ಈ ಸಂಬಂಧ ತಾವು ವಿರೋಧ ಎದುರಿಸಲು ಹಾಗೂ ಸಲಹೆ ಸ್ವೀಕರಿಸಲು ಸಿದ್ಧವಿರುವುದಾಗಿ ಹೇಳಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.