ಅಣ್ಣಾ ಹಜಾರೆ 
ದೇಶ

ಕೇಂದ್ರ ಸರ್ಕಾರ ಜನತೆಯನ್ನು ತಪ್ಪು ದಾರಿಗೆ ಎಳೆಯುತ್ತಿದೆ: ಅಣ್ಣಾ

ಭೂಸ್ವಾಧೀನ ಕಾಯ್ದೆ ಸಂಬಂಧ ಕೇಂದ್ರ ಸರ್ಕಾರ ಜನತೆಯ ಹಾದಿ ತಪ್ಪಿಸುತ್ತಿದೆ ಎಂದು ಸಾಮಾಜಿಕ...

ನವದೆಹಲಿ: ಭೂಸ್ವಾಧೀನ ಕಾಯ್ದೆ ಸಂಬಂಧ ಕೇಂದ್ರ ಸರ್ಕಾರ ಜನತೆಯ ಹಾದಿ ತಪ್ಪಿಸುತ್ತಿದೆ ಎಂದು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಬುಧವಾರ ಹೇಳಿದ್ದಾರೆ.

ಭೂಸ್ವಾಧೀನ ಕಾಯ್ದೆಯಲ್ಲಿ ಯಾವುದೇ ದೋಷವಿಲ್ಲ. ಇದೊಂದು ಉತ್ತಮ ಕಾಯ್ದೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ನೀಡಿದ್ದರು.

ಇದನ್ನು ವಿರೋಧಿಸಿರುವ ಅಣ್ಮಾ ಹಜಾರೆ, ಕೇಂದ್ರ ಸರ್ಕಾರ ಜನರಿಗೆ ಸುಳ್ಳು ಮಾಹಿತಿ ನೀಡಿ, ಹಾದಿ ತಪ್ಪಿಸುತ್ತಿದೆ. ಭೂ ಸ್ವಾಧೀನ ಕಾಯ್ದೆ ಸುಗ್ರಿವಾಜ್ಞೆ ಜನವಿರೋಧಿಯಾಗಿದೆ ಎಂದು ತಿಳಿಸಿದ್ದಾರೆ.  

ಕಪ್ಪುಹಣ ಪ್ರಕರಣ, ಭೂ ಸ್ವಾಧೀನ ಕಾಯ್ದೆ ಸೇರಿದಂತೆ ಇತರ ವಿಷಯಗಳ ಬಗ್ಗೆ ಕೇಂದ್ರ ಸರ್ಕಾರ ಜನರಿಗೆ ವಂಚಿಸುತ್ತಾ ಬಂದಿದೆ. ಚುನಾವಣೆಯಲ್ಲಿ ಗೆಲ್ಲುವ ಉದ್ದೇಶದಿಂದ ಸುಳ್ಳು ಆಶ್ವಾಸನೆ ನೀಡಿತ್ತು. ಗೆದ್ದ ನಂತರ ನೀಡಿದ ಆಶ್ವಾಸನೆಗಳನ್ನು ಮರೆತಿದೆ. ಕೇವಲ ಮಾತುಗಳಲ್ಲಿ ಹಾಗೆ ಮಾಡುತ್ತೇವೆ ಹೀಗೆ ಮಾಡುತ್ತೇವೆ ಎಂದು ಹೇಳಿ ಜನರ ನಂಬಿಕೆಯನ್ನು ಹುಸಿಗೊಳಿಸುತ್ತಿದೆ ಎಂದು ಅಣ್ಣಾ ದೂರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

PoK ಚುನಾವಣೆ ಒಂದು ನೆಪ; ಪ್ರತಿಭಟನೆಯನ್ನು ಹತ್ತಿಕ್ಕಲು ಗುಂಡುಗಳ ಬಳಕೆ: ಭಾರತ ಖಂಡನೆ

ಸಂಪುಟ ವಿಸ್ತರಣೆ ಸರ್ಕಸ್ ನಂತರ ಖಾತೆ ಹಂಚಿಕೆ ಕಸರತ್ತು; ಯಾರಿಗೆ ಯಾವ ಖಾತೆ? ಇಲ್ಲಿದೆ ಸಂಪೂರ್ಣ ಪಟ್ಟಿ

'ನನ್ನ ಅಮ್ಮ ಒಂಥರಾ ಗೂಢಚಾರಿ ಇದ್ದಂತೆ; ಅಪ್ಪ CM ಆಗಿದ್ದು ಐತಿಹಾಸಿಕ ಕ್ಷಣ': ಫಸ್ಟ್ ಟೈಮ್ ಮನಬಿಚ್ಚಿ ಮಾತನಾಡಿದ ವಿಜಯ್ ಪುತ್ರ!

ಜೀವನದ ಅತಿ ದುಬಾರಿ ಖರೀದಿಯನ್ನು ಬಹಿರಂಗಪಡಿಸಿದ Madhavan; ಬ್ಯಾಂಕ್ ಬ್ಯಾಲೆನ್ಸ್ ಬಗ್ಗೆ ನಾನು ತುಂಬಾ Insecure ಅಂದಿದ್ದೇಕೆ ನಟ?

ರಾಜ್ಯದ ರೈತರಿಗೆ ತಕ್ಷಣ 10 ಸಾವಿರ ಕೋಟಿ ರೂ. ಪರಿಹಾರ ಬಿಡುಗಡೆ ಮಾಡಿ: ರಾಜ್ಯ ಸರ್ಕಾರಕ್ಕೆ ಬಿ.ವೈ. ವಿಜಯೇಂದ್ರ ಆಗ್ರಹ