ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಅನಂತಕುಮಾರ್ 
ದೇಶ

ಶೀಘ್ರದಲ್ಲೇ ರಸಗೊಬ್ಬರ ಸಬ್ಸಿಡಿ ನೇರ ರೈತರ ಖಾತೆಗೆ

ಕೇಂದ್ರ ಸರ್ಕಾರ ರಸಗೊಬ್ಬರ ಸಬ್ಸಿಡಿಯನ್ನು ನೇರವಾಗಿ ರೈತರ ಖಾತೆಗೆ ಪಾವತಿಸಲು ಶೀಘ್ರದಲ್ಲೇ ಕ್ರಮ ಕೈಗೊಳ್ಳಲಿದೆ...

ನವದೆಹಲಿ: ಕೇಂದ್ರ ಸರ್ಕಾರ ರಸಗೊಬ್ಬರ ಸಬ್ಸಿಡಿಯನ್ನು ನೇರವಾಗಿ ರೈತರ ಖಾತೆಗೆ ಪಾವತಿಸಲು ಶೀಘ್ರದಲ್ಲೇ ಕ್ರಮ ಕೈಗೊಳ್ಳಲಿದೆ.

ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಅನಂತಕುಮಾರ್ ಮಂಗಳವಾರ ಲೋಕಸಭೆಯಲ್ಲಿ ಈ ವಿಷಯ ತಿಳಿಸಿದ್ದಾರೆ. ಪ್ರಶ್ನೋತ್ತರ ವೇಳೆ ಹಲವು ಸದಸ್ಯರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವ ಅನಂತ ಕುಮಾರ್, ಈಗಾಗಲೇ ಅಡುಗೆ ಅನಿಲ ಸಬ್ಸಿಡಿಯನ್ನು ನೇರವಾಗಿ ಗ್ರಾಹಕರ ಖಾತೆಗೆ ಪಾವತಿಸುತ್ತಿರುವಂತೆ, ರೈತರ ಖಾತೆಗೂ ನೇರವಾಗಿ ರಸಗೊಬ್ಬರ ಸಬ್ಸಿಡಿ ಹಣ ಪಾವತಿಸಲು ಶೀಘ್ರ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ. ಸಬ್ಸಿಡಿ ಹಣ ಪೊಲಾಗದಂತೆ ನೇರ ರೈತರಿಗೆ ತಲುಪಬೇಕೆಂಬುದು ಪ್ರಧಾನಿಯ ಆಶಯವಾಗಿದೆ ಎಂದಿದ್ದಾರೆ.

ಕೊರತೆ ಇಲ್ಲ: ರಾಷ್ಟ್ರದಲ್ಲಿ ಎಲ್ಲೂ ರಸಗೊಬ್ಬರ ಕೊರತೆ ಇಲ್ಲ. ಪ್ರತಿ ತಿಂಗಳು ಆಯಾ ರಾಜ್ಯಗಳಿಗೆ ಎಷ್ಟು ಅಗತ್ಯವಿದೆಯೋ ಅಷ್ಟನ್ನು ಸಕಾಲದಲ್ಲಿ ತಲುಪಿಸಲಾಗಿದೆ. ನಮಗೆ ಯೂರಿಯಾ31 ದಶಲಕ್ಷಟನ್, ಡಿಎಪಿ, ಎಂಒಪಿ ಇತರೆ ರಸಗೊಬ್ಬರ 30 ದಶಲಕ್ಷ ಟನ್ ಅಗತ್ಯವಿದ್ದು ಅಷ್ಟನ್ನೂ ಒದಗಿಸಲಾಗಿದೆ. ಮಹಾರಾಷ್ಟ್ರ ಸೇರಿದಂತೆ ಯಾವ ರಾಜ್ಯಕ್ಕೂ ರಸಗೊಬ್ಬರ ಕೊರತೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT