ನವದೆಹಲಿ: ಇಂಡಿಯಾ ಸಿಮೆಂಟ್ಸ್ ಮಾಲೀಕ ಎನ್ ಶ್ರೀನಿವಾಸನ್ ಅವರು ಶುಕ್ರವಾರ ಸುಪ್ರೀಂ ಕೋರ್ಟ್‌ಗೆ ಕ್ಷಮೆಯಾಚಿಸಿದ್ದಾರೆ.
ಫೆಬ್ರವರಿ 8 ರಂದು ರಂದು ಚೆನ್ನೈನಲ್ಲಿ ನಡೆದ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಲಿ(ಬಿಸಿಸಿಐ)ಯ ಕಾರ್ಯಕಾರಿಣಿ ಸಭೆಯಲ್ಲಿ ಬಿಸಿಸಿಐನ ಮಾಜಿ ಅಧ್ಯಕ್ಷ ಎನ್.ಶ್ರೀನಿವಾಸನ್ ಭಾಗವಹಿಸಿದ್ದರು. ಇದಕ್ಕೆ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತ್ತು.
ಇದಕ್ಕೆ ಪ್ರತಿಕ್ರಯಿಸಿರುವ ಶ್ರೀನಿವಾಸನ್, ಸಭೆಯಲ್ಲಿ ಭಾಗಿಯಾಗಿರುವುದಕ್ಕೆ ಸುಪ್ರೀಂ ಕೋರ್ಟ್‌ಗೆ ಕ್ಷಮೆಯಾಚಿಸುತ್ತೇನೆ ಎಂದು ಹೇಳಿದ್ದಾರೆ. ಅಲ್ಲದೇ, ಮಾರ್ಚ್ 2 ರಂದು ನಡೆಯಲಿರುವ ಬಿಸಿಸಿಐ ಎಜಿಎಂನಲ್ಲಿ ಶ್ರೀನಿವಾಸನ್ ಭಾಗವಹಿಸುವುದಿಲ್ಲ ಎಂದು ಶ್ರೀನಿವಾಸನ್ ಪರ ವಕೀಲ ಕಪಿಲ್ ಸಿಬಲ್ ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದಾರೆ.
ಬಿಸಿಸಿಐನ ಯಾವುದೇ ಸಭೆಗಳಿಗೆ ಹಾಜರಾಗಬಾರದೆಂಬ ಸುಪ್ರೀಂಕೋರ್ಟ್‌ನ ಆದೇಶವಿದ್ದರು. ಕಳೆದ ಫೆಬ್ರವರಿ 8 ರಂದು ನಡೆದ ಬಿಸಿಸಿಐ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಿದ್ದು ಸರಿಯಲ್ಲ ಎಂದು ನ್ಯಾಯಮೂರ್ತಿಗಳಾದ ಟಿ.ಎಸ್ ಠಾಕೂರ್ ಮತ್ತು ಇಬ್ರಾಹಿಂ ಖಲಿಪುಲ್ಲಾ ಕಿಡಿಕಾರಿದ್ದು, ಅಲ್ಲದೆ ಈ ಕುರಿತಂತೆ ನೋಟಿಸ್ ನೀಡಿದ್ದ, ಫೆಬ್ರವರಿ 27ರೊಳಗೆ ಉತ್ತರಿಸುವಂತೆ ಸೂಚಿಸಿದ್ದರು.
ಈ ಹಿಂದೆ ಐಪಿಎಲ್ ಸ್ಫಾಟ್ ಫಿಕ್ಸಿಂಗ್‌ಗೆ ಸಂಬಂಧಿಸಿದಂತೆ ಆದೇಶ ನೀಡಿದ್ದ ಸುಪ್ರೀಂ ಕೋರ್ಟ್, ಬಿಸಿಸಿಐ ಮಂಡಳಿಯ ಅಧ್ಯಕ್ಷ ಚುನಾವಣೆಯಲ್ಲಿ ಭಾಗವಹಿಸಬಾರದು. ಅಷ್ಟೇ ಅಲ್ಲದೆ ಮಂಡಳಿ ನಡೆಸುವ ಯಾವುದೇ ಸಭೆಗಳಲ್ಲಿ ಭಾಗವಹಿಸಬಾರದು ಎಂದು ಸೂಚಿಸಿ ಆದೇಶಿತ್ತು.