ಜೆ ಜಯಲಲಿತಾ 
ದೇಶ

ಜಯಾ ಪ್ರಕರಣದ ಪಿಪಿ ವಜಾಕ್ಕೆ ಡಿಎಂಕೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿಕೆ

ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ ಜಯಲಲಿತಾ ಅವರು ಕರ್ನಾಟಕ ಹೈ ಕೋರ್ಟ್‌ಗೆ ಸಲ್ಲಿಸಿರುವ ಮೇಲ್ಮನವಿ ವಿಚಾರಣೆಗೆ ತಡೆ...

ನವದೆಹಲಿ: ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ ಜಯಲಲಿತಾ ಅವರು ಕರ್ನಾಟಕ ಹೈ ಕೋರ್ಟ್‌ಗೆ ಸಲ್ಲಿಸಿರುವ ಮೇಲ್ಮನವಿ ವಿಚಾರಣೆಗೆ ತಡೆ ನೀಡುವಂತೆ ಮತ್ತು ಪ್ರಕರಣದ ಪಬ್ಲಿಕ್ ಪ್ರಾಸಿಕ್ಯೂಟರ್ ಭವಾನಿಸಿಂಗ್ ಅವರನ್ನು ವಜಾಗೊಳಿಸಬೇಕು ಎಂದು ಕೋರಿ ಡಿಎಂಕೆ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮಾರ್ಚ್ 8ಕ್ಕೆ ಮುಂದೂಡಿದೆ.

''ಪಬ್ಲಿಕ್ ಪ್ರಾಸಿಕ್ಯೂಟರ್ ಅವರು ಪ್ರಕರಣವನ್ನು ನಿಷ್ಪಕ್ಷಪಾತವಾಗಿ ಪರಿಗಣಿಸುತ್ತಿಲ್ಲ ಎಂಬ ಆರೋಪವಿದ್ದು, ಅವರನ್ನು ಕೈ ಬಿಡಬೇಕು,'' ಎಂದು ಡಿಎಂಕೆ ಪ್ರಧಾನ ಕಾರ‌್ಯದರ್ಶಿ ಕೆ ಅನ್ಬುಗನ್ ಕೋರಿದ್ದರು.  

ಅರ್ಜಿಯ ಬಗ್ಗೆ ನಾವು ಇನ್ನು ಪರಿಶೀಲಿಸಿಲ್ಲ. ಹಾಗಾಗಿ, ಪ್ರಕರಣ ಸಂಬಂಧ ಯಾವುದೇ ಹೇಳಿಕೆ ನೀಡಲಾಗುವುದಿಲ್ಲ ಎಂದು ಹೇಳುವ ಮೂಲಕ ನ್ಯಾಯಾಮೂರ್ತಿಗಳಾದ ಪಿನಕಿ ಚಂದ್ರ ಮತ್ತು ಆರ್.ಕೆ ಅಗರ್ವಾಲ್ ಅವರನ್ನೊಳಗೊಂಡ ನ್ಯಾಯಾಪೀಠ ಈ ಅರ್ಜಿ ವಿಚಾರಣೆಯನ್ನು ಮುಂದೂಡಿದೆ.

ಸುಪ್ರೀಂ ಕೋರ್ಟ್ ಕಳೆದ ಡಿಸೆಂಬರ್‌ನಲ್ಲಿ ಜಯಾ ಅವರ ಜಾಮೀನು ಅವಧಿಯನ್ನು 4 ತಿಂಗಳು ವಿಸ್ತರಿಸಿ, ಪ್ರಕರಣದ ವಿಚಾರಣೆಯನ್ನು 3 ತಿಂಗಳೊಳಗೆ ಮುಗಿಸಲು ವಿಶೇಷ ಪೀಠ ರಚಿಸುವಂತೆ ಕರ್ನಾಟಕ ಹೈಕೋರ್ಟ್‌ನ ಮುಖ್ಯನ್ಯಾಯಮೂರ್ತಿಗೆ ಸೂಚಿಸಿತ್ತು. ಅದೇ ರೀತಿ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಅವರಿಗೂ ಸಲ್ಲಿಸುವಂತೆ ತಿಳಿಸಿತ್ತು.

100 ಕೋಟಿ ರೂ. ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಕೋರ್ಟ್ ಜಯಲಲಿತಾ ಮತ್ತು ಅವರ ಸಹಚರರಿಬ್ಬರಿಗೆ 4 ವರ್ಷಗಳ ಜೈಲು ಶಿಕ್ಷೆ ಹಾಗೂ ತಲಾ 10 ಕೋಟಿ ರೂ. ದಂಡ ವಿಧಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ..!

ಏಷ್ಯನ್‌ ಗೇಮ್ಸ್‌ ವಿಜೇತರಿಗೆ ಸಿಎಂ ಅಭಿನಂದನೆ; ಚಿನ್ನದ ಪದಕ ವಿಜೇತರಿಗೆ 1 ಕೋಟಿ ನಗದು,ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ!

'ಮತದಾರರ ಪಟ್ಟಿ ಪರಿಷ್ಕರಣೆ'ಯಲ್ಲಿ ಅಕ್ರಮ ಆರೋಪ; CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ, INDIA ಒಕ್ಕೂಟದಿಂದ ‘ಪ್ರಜಾಪ್ರಭುತ್ವ ಉಳಿಸಿ’ ಪಾದಯಾತ್ರೆ ಆರಂಭ..!

ಶಾಲೆಗಳಲ್ಲಿ ಸಂವಿಧಾನದ ಪ್ರಸ್ತಾವನೆ ಪಠಣೆ: ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್!

9/11 ಮಾದರಿಯಲ್ಲೇ ಇಸ್ರೇಲ್ ಧ್ವಂಸಕ್ಕೆ ಸಂಚು..! ಫ್ಲೈದುಬೈ ಏರ್‌ಲೈನ್ಸ್ ಸೇರಿದ್ದೇ ಆ ಕ್ರೂರ ಉದ್ದೇಶಕ್ಕಾಗಿ; ಸತ್ಯ ಬಾಯಿಬಿಟ್ಟ ಕಿಲ್ಲರ್ ಪೈಲಟ್ ಹಮಾಮ್..!