ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ನಿರೀಕ್ಷೆಯಂತೆ ಮಾ.1ರಂದು ಪಿಡಿಪಿ ಬಿಜೆಪಿ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ಅಂದು ಪಿಡಿಪಿ ನಾಯಕ ಮುಫ್ತಿ ಮೊಹಮ್ಮದ್ ಸಯೀದ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮುಫ್ತಿ ಅವರು ಒಟ್ಟು 24 ಮಂದಿ ಸಚಿವ ಸಂಪುಟದ ನೇತೃತ್ವವಹಿಸಲಿದ್ದು, ಇದರಲ್ಲಿ ಬಿಜೆಪಿ ಹಾಗೂ ಪಿಡಿಪಿ ತಲಾ 12 ಸ್ಥಾನಗಳನ್ನು ಹಂಚಿಕೊಳ್ಳಲಿವೆ. ಈ ಸಂಬಂಧ ಮುಫ್ತಿ ಮೊಹಮ್ಮದ್ ಸಯೀದ್ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಯಾಗಿ ಕೆಲಕಾಲ ಮಾತುಕತೆ ನಡೆಸಿ ದರು. ಸುಮಾರು ಒಂದು ಗಂಟೆ ಕಾಲ ನಡೆದ ಚರ್ಚೆಯಲ್ಲಿ ಅವರು ಸರ್ಕಾರ ರಚನೆಗೆ ಸಂಬಂಧಿಸಿದ ಅಂತಿಮ ಮಾತುಕತೆ ನಡೆಸಿದರು. ಈ ವೇಳೆ ಪ್ರಧಾನಿ ಮೋದಿ ಅವರಿಗೂ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ
ಮುಫ್ತಿ ಆಹ್ವಾನ ನೀಡಿದರು. ಬಿಜೆಪಿ ಪಾಲಿಗೆ ಐತಿಹಾಸಿಕವಾಗಿರುವ ಈ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರು ಪಾಲ್ಗೊಳ್ಳಲಿದ್ದಾರೆ ಎಂದು ಮೈತ್ರಿ ಕುದುರಿಸುವಲ್ಲಿ ಮಹತ್ವ ದ ಪಾತ್ರವಹಿಸಿದ್ದ ಪಿಡಿಪಿ ಮುಖಂಡ ಹಸೀಬ್ ದ್ರಾಬು ತಿಳಿಸಿದ್ದಾರೆ.