ಜಮ್ಮು-ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಜಮ್ಮ ಮತ್ತು ಕಾಶ್ಮೀರದಲ್ಲಿ ಶಾಂತಿಯುತ ಮತದಾನಕ್ಕೆ ಪಾಕಿಸ್ತಾನ ಕಾರಣ ಎಂದು ಹೇಳಿದ್ದ ಮುಪ್ತಿ ಮೊಹಮ್ಮದ್ ಸಯೀದ್ ಹೇಳಿಗೆ ಮೈತ್ರಿಪಕ್ಷ ಬಿಜೆಪಿ ತಿರುಗೇಟು ನೀಡಿದೆ.
ಶಾಂತಿಯುವ ಮತದಾನಕ್ಕೆ ಕಾರಣ ಕೇಂದ್ರ ಚುನಾವಣಾ ಆಯೋಗ ಮತ್ತು ಭಾರತೀಯ ಸೇನಾಪಡೆ ಎಂದು ಬಿಜೆಪಿ ಮುಫ್ತಿ ಹೇಳಿಕೆಗೆ ತಿರುಗೇಟು ನೀಡಿದೆ.
ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಮುಫ್ತಿ ಪಾಕಿಸ್ತಾನವನ್ನು ಹಾಡಿ ಹೋಗಳಿದ್ದರು. ಮುಫ್ತಿ ಅವರ ಹೇಳಿಕೆ ದೇಶಾದ್ಯಂತ ವ್ಯಾಪಕ ಟೀಕೆಗೆ ಕಾರಣವಾಗಿತ್ತು.
ಜಮ್ಮು-ಕಾಶ್ಮೀರದಲ್ಲಿ ಮೊದಲ ಬಾರಿಗೆ ಪಿಡಿಪಿ-ಬಿಜೆಪಿ ಮೈತ್ರಿಕೂಟದ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ಪಿಡಿಪಿಯ ಮುಫ್ತಿ ಮೊಹಮ್ಮದ್ ಸಯೀದ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ನೀಡಿದ ಹೇಳಿಕೆ ಇದೀಗ ಮೈತ್ರಿಕೂಟದ ಬಿಜೆಪಿಯ ಕಣ್ಣು ಕೆಂಪಾಗಿಸಿತ್ತು.
ಹೌದು 2014ರ ನವೆಂಬರ್ - ಡಿಸೆಂಬರ್ ತಿಂಗಳಲ್ಲಿ ಕಣಿವೆ ರಾಜ್ಯದಲ್ಲಿ ಐದು ಹಂತಗಳಲ್ಲಿ ಚುನಾವಣೆ ಶಾಂತಿಯುತವಾಗಿ ಮತ್ತು ಯಶಸ್ವಿಯಾಗಿ ನಡೆಯಲು ಪಾಕಿಸ್ತಾನ, ಹುರಿಯತ್ ಕಾನ್ಫರೆನ್ಸ್ ಹಾಗೂ ಉಗ್ರಗಾಮಿ ಸಂಘಟನೆಗಳ ಅನುಕೂಲಕರ ವಾತಾವರಣವೇ ಕಾರಣ ಎಂದು ಮುಖ್ಯಮಂತ್ರಿಯಾಗಿ ಮುಫ್ತಿ ಪ್ರಮಾಣವಚನ ಸ್ವೀಕರಿಸಿದ ನಂತರದ ಮೊದಲ ಪತ್ರಿಕಾಗೋಷ್ಠಿಯಲ್ಲಿ ಹೇಳಿದ ಮಾತುಗಳಿವು.
ಜಮ್ಮು ಕಾಶ್ಮೀರದ ವಿಧಾನಸಭಾ ಚುನಾವಣೆಗೆ ಪಾಕಿಸ್ತಾನ, ಹುರಿಯತ್ ಮತ್ತು ಉಗ್ರರು ಅನುಕೂಲಕರ ವಾತಾವರಣ ಕಲ್ಪಿಸಿಕೊಟ್ಟಿದ್ದರಿಂದಲೇ ಯಶಸ್ವಿಯಾಗಿ ನಡೆಯಲು ಸಾಧ್ಯವಾಯಿತು ಎಂದು ಮುಫ್ತಿ ಹೇಳಿರುವುದು ಇದೀಗ ವಿವಾದಕ್ಕೆ ಎಡೆಮಾಡಿಕೊಟ್ಟಿತ್ತು.