ದೇಶ

ಭಾರತದೊಳಗೆ ನುಸುಳಲು 50-60 ಶಸ್ತ್ರಸಜ್ಜಿತ ಉಗ್ರರ ಸಂಚು

ಸುಮಾರು 50 ರಿಂದ 60 ಶಸ್ತ್ರಾಸ್ತ್ರನ್ನೊಳಗೊಂಡಿರುವ ಉಗ್ರರು ಗಡಿ ನಿಯಂತ್ರಣ ರೇಖೆ ಬಳಿ ಭಾರತದೊಳಗೆ...

ಜಮ್ಮು ಕಾಶ್ಮೀರ: ಸುಮಾರು 50 ರಿಂದ 60 ಶಸ್ತ್ರಾಸ್ತ್ರನ್ನೊಳಗೊಂಡಿರುವ ಉಗ್ರರು ಗಡಿ ನಿಯಂತ್ರಣ ರೇಖೆ ಬಳಿ ಭಾರತದೊಳಗೆ ನುಸುಳಲು ಹೊಂಚು ಹಾಕಿದ್ದು, ಗಡಿ ಭಾಗದಲ್ಲಿ ಬೀಡೂರಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಭಾರತದ ಗಡಿಯಲ್ಲಿ ಹೆಚ್ಚಿನ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದ್ದು, ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎದು ಗಡಿ ಭದ್ರತಾ ದಳದ ಇನ್ಸ್‌ಪೆಕ್ಟರ್ ರಾಕೇಶ್ ಶರ್ಮಾ ಹೇಳಿದ್ದಾರೆ.

ಪಾಕಿಸ್ತಾನದ ಗಡಿಯಿಂದ ಭಾರತದ ಗಡಿಯೊಳಗೆ ನುಸುಳಲು 50-60 ಉಗ್ರರು ಹೊಂಚು ಹಾಕುತ್ತಿದ್ದಾರೆ. ಭಾರತದ ಮೇಲೆ ದಾಳಿ ನಡೆಸಲು 150ರಿಂದ 170 ಉಗ್ರರಿಗೆ ಪಾಕಿಸ್ತಾನದಲ್ಲಿ ತರಬೇತಿ ನೀಡಲಾಗಿದೆ ಎಂಬ ಮಾಹಿತಿ ಸಿಕ್ಕಿದೆ ಎಂದು ಅವರು ತಿಳಿಸಿದ್ದಾರೆ.

ಒಂದು ಕಡೆ ಪಾಕಿಸ್ತಾನ ಸೇನಾ ಪಡೆ ಕದನ ವಿರಾಮ ಉಲ್ಲಂಘನೆ ಮಾಡಿ ಭಾರತದ ಮೇಲೆ ದಾಳಿ ಮಾಡುತ್ತಿದ್ದರೆ, ಮತ್ತೊಂದು ಕಡೆ, ಅದೇ ಪಾಕ್ ನೆಲೆಯಲ್ಲಿ ಉಗ್ರರಿಗೆ ತರಬೇತಿ ನೀಡಿ, ಭಾರತದೊಳಗೆ ನುಸುಳುವ ಕಾರ್ಯ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.

ಕಾಶ್ಮೀರ ಕಣಿವೆಯಲ್ಲಿ ಮಂಜು ಬೀಳುತ್ತಿದ್ದು, ಈ ಸಮಯದಲ್ಲಿ ಕಾಶ್ಮೀರದೊಳಗೆ ನುಸುಳಿ ಇಡೀ ಪ್ರದೇಶವನ್ನೇ ಆಕ್ರಮಣ ಮಾಡಿ ತನ್ನದಾಗಿಸಿಕೊಳ್ಳುವ ತಂತ್ರವನ್ನು ಲಷ್ಕರ್-ಇ-ತೋಯ್ಬಾ ಉಗ್ರ ಸಂಘಟನೆ ರೂಪಿಸಿದೆ.

ಭಾರತಕ್ಕೆ ಜನವರಿ 26ರಂದು ಅಮೆರಿಕ ಅಧ್ಯಕ್ಷ ಬರಾಕ್ ಒಬಮಾ ಭೇಟಿ ನೀಡುವುದನ್ನೇ ಕಾಯುತ್ತಿರುವ ಉಗ್ರರು ಯಾವುದೇ ಸಂದರ್ಭದಲ್ಲಿ ಭಾರತದ ಮೇಲೆ ದಾಳಿ ನಡೆಸಬಹುದು ಎಂಬ ಮಾಹಿತಿ ಗುಪ್ತಚರ ಇಲಾಖೆ ನೀಡಿದೆ.

ಶಸ್ತ್ರಾಸ್ತ್ರಗಳನ್ನು ಹಿಡಿದುಕೊಂಡಿರುವ ಉಗ್ರರು ಪೂರ್ಣ ರೀತಿಯಲ್ಲಿ ಜಾಗೃತರಾಗಿದ್ದು, ಯಾವುದೇ ಕ್ಷಣದಲ್ಲಿ ದಾಳಿ ಮಾಡಬಹುದಾಗಿದ್ದು, ಗಡಿ ಭಾಗದಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿದೆ ಎಂದು ತಿಳಿದು ಬಂದಿದೆ.


Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೈಸೂರು ರಾಜಮನೆತನ ಹೊರಗಿಟ್ಟು ಕರ್ನಾಟಕ ಇತಿಹಾಸ ಊಹಿಸುವುದು ಕಷ್ಟ': ಗವಿಸಿದ್ಧೇಶ್ವರ ಶ್ರೀಗಳು; Video

'ಮೊದಲು ನಿಮ್ಮ ಅಮೆರಿಕದಲ್ಲಿ ಕೈಗೆಟುಕುವ ದರದಲ್ಲಿ ಸೇವೆ ಒದಗಿಸಿ': ಒತ್ತಡಕ್ಕೆ ಭಾರತ ಮಣಿಯಲ್ಲ; ಎಲಾನ್ ಮಸ್ಕ್ ವಿರುದ್ಧ ನಿಶಿಕಾಂತ್ ದುಬೆ

'ನನ್ನನ್ನಲ್ಲ, ನಿಮ್ ಗಂಡನ ಗುರಾಯಿಸಿ', ಜಯಾ ಬಚ್ಚನ್‌ ಖಡಕ್ ನೋಟಕ್ಕೆ ಫೋಟೋಗ್ರಾಫರ್ ತಿರುಗೇಟು! Video

ಮೈಸೂರು ದಸರಾಕ್ಕೆ ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳಿಂದ ಅಧಿಕೃತ ಚಾಲನೆ

4 ಜನರಿಗೆ ಒಂದೇ ಟಿಕೆಟ್! ಸಾರಿಗೆ ಇಲಾಖೆಯಲ್ಲಿ ಡೀಸೆಲ್ ಬೆನ್ನಲ್ಲೇ ಟಿಕೆಟ್ ರೋಲ್ ಕೊರತೆ