ರುಕ್ಸರ್ ಮೃತ ದುರ್ದೈವಿ 
ದೇಶ

ಮುಜಾಫರ್ ನಗರದಲ್ಲಿ ಮತ್ತೊಂದು ಮರ್ಯಾದ ಹತ್ಯೆ

ಘಟನೆ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ...

ಅಂತರ್ಜಾತಿಯ ಯುವಕನನ್ನು ಪ್ರೀತಿಸುತ್ತಿದ್ದ 19 ವರ್ಷದ ಮಗಳನ್ನು ತಂದೆಯೇ ಕೊಂದು, ಅಂತ್ಯಸಂಸ್ಕಾರ ಮಾಡಿದ ಘಟನೆ ಉತ್ತರಪ್ರದೇಶದ ಮುಜಾಫರ್‌ನಗರದಲ್ಲಿ ಬೆಳಕಿಗೆ ಬಂದಿದೆ.

ರುಕ್ಸರ್ ಮೃತ ದುರ್ದೈವಿಯಾಗಿದ್ದಾಳೆ. ಹಾಸನ್ ಎಂತಾನೇ ಮಗಳನ್ನು ಕೊಂದುಹಾಕಿದ ಪಾಪಿ ತಂದೆ.

ರುಕ್ಸರ್, ದಲಿತಯುವಕನೊಬ್ಬನನ್ನು ಪ್ರೀತಿಸುತ್ತಿದ್ದಳು. ಹಾಸನ್ ಇವರ ಪ್ರೀತಿಯನ್ನು ತೀವ್ರವಾಗಿ ಖಂಡಿಸಿದ್ದನು. ತಂದೆಯ ವಿರೋಧದ ನಡುವೆಯು ರುಕ್ಸರ್ ಆತನನ್ನು ಕಾಣಲು ಹೋಗುತ್ತಿದ್ದಳು. ಇದನ್ನು ಕಂಡ ತಂದೆ ಹಾಸನ್ ಕುಪಿತಗೊಂಡು ಆಕೆಯ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾನೆ. ತೀವ್ರ ರಕ್ತಸ್ರಾವಗೊಂಡ ರುಕ್ಸರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.

ರುಕ್ಸರ್ ತಾಯಿಗೂ ಈ ವಿಷಯ ತಿಳಿಸದೇ, ಆಕೆಯ ಶವವನ್ನು ಸ್ಥಳೀಯ ರುದ್ರಭೂಮಿಯಲ್ಲಿ ಹೂತುಹಾಕಿದ್ದಾನೆ. ಘಟನೆ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನನಗೆ ಗೊತ್ತಿಲ್ಲದೆ, ತನ್ನ ಪತಿ ಹಾಗೂ ಆತನ ಸ್ನೇಹಿತರು ನನ್ನ ಮಗಳನ್ನು ಹೆತ್ಯೆ ಮಾಡಿರುವುದಾಗಿ ತಾಯಿ ಪೊಲೀಸರಿಗೆ ಹೇಳಿಕೆ ನೀಡಿದ್ದಾಳೆ.

ಆದರೆ ತಂದೆ ಹಾಸನ್, ನಾನು ಆಕೆಯ ಮಾರಣಾಂತಿಕ ಹಲ್ಲೆ ಮಾಡಿದ್ದೆ, ಆದರೆ ಆಕೆಯ ಸಾವನ್ನಪ್ಪಿರುವ ವಿಚಾರ ತಿಳಿದ ನನ್ನ ಸ್ನೇಹಿತರು ಆಕೆಯನ್ನು ಹೂತುಹಾಕಿದರು ಎಂದು ವಿವರ ನೀಡಿದ್ದಾನೆ. ರುಕ್ಸಾರ್‌ಳ ಪಾರ್ಥೀವ ಶರೀರವನ್ನು ಪೊಲೀಸರು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

SCROLL FOR NEXT