ಸಾಂದರ್ಭಿಕ ಚಿತ್ರ 
ದೇಶ

ಜೆಲ್ಲಿ ಕಲ್ಲು ತಯಾರಿಕಾ ಘಟಕದ ಮೇಲೆ ನಕ್ಸಲರ ದಾಳಿ

ಕೇರಳದ ಕನ್ನೂರಿನ ಜೆಲ್ಲಿ ಕಲ್ಲು ತಯಾರಿಕಾ ಘಟಕದ ಮೇಲೆ ಶುಕ್ರವಾರ ಬೆಳಿಗ್ಗೆ ದಾಳಿ ನಡೆಸಿದ...

ತಿರುವನಂತಪುರ: ಕೇರಳದ ಕನ್ನೂರಿನ ಜೆಲ್ಲಿ ಕಲ್ಲು ತಯಾರಿಕಾ ಘಟಕದ ಮೇಲೆ ಶುಕ್ರವಾರ ಬೆಳಿಗ್ಗೆ ದಾಳಿ ನಡೆಸಿದ ನಕ್ಸಲರು ಘಟಕಕ್ಕೆ ಬೆಂಕಿ ಇಟ್ಟಿದ್ದು, ಘಟಕದಲ್ಲಿದ್ದ ಹಲವು ವಸ್ತುಗಳು ಅಗ್ನಿಗಾಹುತಿಯಾಗಿವೆ.

ಇಂದು ಬೆಳ್ಳಂಬೆಳಿಗ್ಗೆ 2.30ರ ಸುಮಾರಿಗೆ ಇದ್ದಕ್ಕಿದ್ದಂತೆ ಭದ್ರತಾ ಸಿಬ್ಬಂದಿಯ ವೇಷ ಧರಿಸಿ ಬಂದ ನಕ್ಸಲರ ತಂಡವೊಂದು ಜೆಲ್ಲಿ ಕಲ್ಲು ತಯಾರಿಕಾ ಘಟಕದ ಒಳ ನುಗ್ಗಿ ಸ್ಥಳದಲ್ಲಿದ್ದ ಭದ್ರತಾ ಸಿಬ್ಬಂದಿಗಳಿಗೆ ಥಳಿಸಿ ಘಟಕಕ್ಕೆ ಬೆಂಕಿ ಹಚ್ಚಿದ್ದಾರೆ. ಓರ್ವ ಮಹಿಳೆ ಹಾಗೂ ನಾಲ್ವರು ಪುರುಷರ ತಂಡ ಈ ದಾಳಿ ಮಾಡಿದ್ದು, ಘಟಕದ ಒಳಗಿದ್ದ ವಸ್ತುಗಳು ಅಗ್ನಿಗಾಹುತಿಯಾಗಿವೆ. ಅಲ್ಲದೇ ಘಟಕದಲ್ಲಿ ಅಳವಡಿಸಿದ್ದ ಮೂರು ಸಿಸಿಟಿವಿಗಳನ್ನು ಒಡೆದು ಹಾಕಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಿಮಿಸಿದ ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿವೆ. ಇನ್ನು ಸ್ಥಳದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿಗಳನ್ನು ನಕ್ಸಲರೇ ಕೊಂಡೊಯ್ದಿದ್ದಾರೆ ಎನ್ನಲಾಗುತ್ತಿತ್ತಾದರೂ ನಂತರ ಸಿಸಿಟಿವಿಗಳನ್ನು ಒಡೆದು ಸ್ಥಳದಲ್ಲೇ ಬಿಟ್ಟು ಹೋಗಿದ್ದಾರೆಂದು ಭದ್ರತಾ ಸಿಬ್ಬಂದಿಯೊಬ್ಬ ಹೇಳಿಕೆ ನೀಡಿದ್ದಾನೆ.

ಘಟನೆಗೆ ಸಂಬಂಧಿಸಿದಂತೆ ತನಿಖೆ ಕೈಗೊಂಡಿರುವ ಪೋಲೀಸರು, 'ಎರಡು ತಿಂಗಳ ಅವಧಿಯಲ್ಲಿ ಘಟನೆ ಸೇರಿದಂತೆ ಈ ವರೆಗೂ ಐದು ಬಾರಿ ನಕ್ಸಲರು ದಾಳಿ ನಡೆಸಿದ್ದಾರೆ. ಈಗಾಗಲೇ ಸಿಸಿಟಿವಿಗಾಗಿ ಹುಡುಕಾಟ ನಡೆಸಿದ್ದು, ಸಿಸಿಟಿವಿ ಒಡೆದು ಹಾಕುವುದಕ್ಕೂ ಮೊದಲು ಏನಾದರೂ ದೃಶ್ಯಗಳು ದಾಖಲಾಗಿವೆಯೇ ಎಂಬುದನ್ನು ಪರಿಶೀಲಿಸಬೇಕಿದೆ' ಎಂದು ಹೇಳಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಕೇರಳ ಗೃಹ ಸಚಿವ ರಮೇಶ್ ಚೆನ್ನಿತಾಳ, 'ದಾಳಿಯಲ್ಲಿ ನಕ್ಸಲರ ಕೈವಾಡವಿದ್ದು, ಸರ್ಕಾರ ಕೂಡಲೇ ನಕ್ಸಲರ ವಿರುದ್ದ ಕಠಿಣಕ್ರಮ ಕೈಗೊಳ್ಳುತ್ತದೆ. ಘಟನೆಯಿಂದ ಸಾರ್ವಜನಿಕರು ಯಾವುದೇ ರೀತಿಯ ಭಯ ಪಡಬೇಕಿಲ್ಲ' ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!