ದೇಶ

ನಾಳೆ ಮೋದಿಯಿಂದ 'ದಿ ಇಂಡಿಯನ್ ಸೈನ್ಸ್ ಕಾಂಗ್ರೆಸ್‌' ಉದ್ಘಾಟನೆ

ದೇಶದ ಪ್ರತಿಷ್ಠಿತ ವಿಜ್ಞಾನ ಸಮ್ಮೇಳನವೆಂದೇ ಖ್ಯಾತಿ ಪಡೆದಿರುವ 'ದಿ ಇಂಡಿಯನ್ ಸೈನ್ಸ್...

ಮುಂಬೈ: ದೇಶದ ಪ್ರತಿಷ್ಠಿತ ವಿಜ್ಞಾನ ಸಮ್ಮೇಳನವೆಂದೇ ಖ್ಯಾತಿ ಪಡೆದಿರುವ 'ದಿ ಇಂಡಿಯನ್ ಸೈನ್ಸ್ ಕಾಂಗ್ರೆಸ್‌' 102ನೇ ಸಮಾವೇಶವನ್ನು ಪ್ರಧಾನಿ ನರೇಂದ್ರ ಮೋದಿ ನಾಳೆ ಉದ್ಘಾಟಿಸಲಿದ್ದಾರೆ.

ಮುಂಬೈನ ಕಲಿನ ಆವರಣದಲ್ಲಿ ನಾಳೆಯಿಂದ ಜನವರಿ 7ವರೆಗೆ ಈ ಸಮಾವೇಶ ನಡೆಯಲಿದ್ದು, ಮುಂಬೈ ವಿಶ್ವವಿದ್ಯಾಲಯದ ನೇತೃತ್ವದಲ್ಲಿ ಸಮಾವೇಶವನ್ನು ಆಯೋಜಿಸಲಾಗಿದೆ. ಸಮಾವೇಶದಲ್ಲಿ ಮಾನವ ಅಭಿವೃದ್ಧಿಗೆ ವಿಜ್ಞಾನ ಮತ್ತು ತಂತ್ರಜ್ಞಾನ ವಿಷಯ ಕುರಿತು ಚರ್ಚಿಸಲಾಗುವುದು ಎಂದು ಉಪ ಕುಲಪತಿ ರಾಜನ್ ವೆಲುಕರ್ ತಿಳಿಸಿದ್ದಾರೆ.

ಇದೇ ಸಮಾವೇಶವನ್ನು 1969ರಲ್ಲಿ ಮುಂಬೈನಲ್ಲಿ ಆಯೋಜಿಸಲಾಗಿತ್ತು. ಅನೇಕ ದಶಕಗಳ ನಂತರ ಈಗ ಮತ್ತೆ ಮುಂಬೈನಲ್ಲಿ ಆಯೋಜಿಸಲಾಗಿದೆ.

ದೇಶದ ಪ್ರತಿಷ್ಠಿತ ವೈಜ್ಞಾನಿಕ ಸಮಾವೇಶವಾಗಿದ್ದು, ಈ ಸಮಾವೇಶದಲ್ಲಿ ದೇಶದ ಪ್ರತಿಷ್ಠಿತ ವಿಜ್ಞಾನಿಗಳು ಮಾತ್ರವಲ್ಲದೆ ವಿದೇಶದ ವಿಜ್ಞಾನಿಗಳು ಪಾಲ್ಗೊಳ್ಳುವರು. ಸುಮಾರು 12,000 ಮಂದಿ ವಿಜ್ಞಾನಿಗಳು ಮತ್ತು ನೋಬೆಲ್ ಪ್ರಶಸ್ತಿ ಪುರಸ್ಕೃತರು ಭಾಗವಹಿಸಲಿದ್ದಾರೆ.

ಐದು ದಿನಗಳ ಕಾಲ ನಡೆಯಲಿರುವ ಈ ಸಮಾವೇಶದಲ್ಲಿ ಮಹಿಳೆಯರು ಹಾಗೂ ಮಕ್ಕಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ವಿಭಾಗಗಳಿದ್ದು ಅಲ್ಲಿ ಅವರು ವೈಜ್ಞಾನಿಕ ಕ್ಷೇತ್ರಕ್ಕೆ ಸಂಬಂಧಿಸಿದ ವಿಚಾರಗಳನ್ನು ಮಂಡಿಸುವರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT