ಚೆನ್ನೈ: ಡಿಎಂಕೆ ಪಕ್ಷದ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕಾಗಿ ಅಣ್ಣತಮ್ಮಂದಿರ ನಡುವೆ ಭಿನ್ನಮತ ಹೆಚ್ಚಾಗುತ್ತಿದೆ ಎಂಬ ಮಾತನ್ನು ತಳ್ಳಿ ಹಾಕಿರುವ ಕರಣಾನಿಧಿ ಪುತ್ರ ಸ್ಟ್ಯಾಲಿನ್, ಪಕ್ಷದಲ್ಲಿ ಹಾಗೂ ನಮ್ಮ ನಡುವೆ ಯಾವುದೇ ಭಿನ್ನಮತವಿಲ್ಲ ಎಂದು ಹೇಳಿದ್ದಾರೆ.
ಡಿಎಂಕೆ ಪಕ್ಷದಲ್ಲಿ ಪ್ರಧಾನ ಕಾರ್ಯದರ್ಶಿ ಸೇರಿದಂತೆ ಪ್ರಮುಖ ಹುದ್ದೆಗಳಿಗೆ ಚುನಾವಣೆ ನಡೆಸಲಾಗುತ್ತಿದೆ. ಪ್ರಸ್ತುತ ಡಿಎಂಕೆ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಕರಣಾನಿಧಿ ಹಿರಿಯ ಪುತ್ರ ಕೆ.ಅನ್ಬಳಗನ್ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಸ್ಥಾನಕ್ಕೆ ಸ್ಟ್ಯಾಲಿನ್ ಸ್ಫರ್ಧಿಸಬೇಕು. ಅನ್ಬಳಗನ್ ಕಾರ್ಯದರ್ಶಿಯಾಗಿ ಮುಂದುವರೆಯುವುದು ಇಷ್ಟವಿಲ್ಲ ಎಂದು ಸ್ಟ್ಯಾಲಿನ್ ಬೆಂಬಲಿಗರು ಒತ್ತಾಯಿಸುತ್ತಿದ್ದಾರೆ.
ಈ ಹಿನ್ನಲೆಯಲ್ಲಿ ಸ್ಟ್ಯಾಲಿನ್ ಬೆಂಬಲಿಗರು ಮತ್ತು ಡಿಎಂಕೆ ಪಕ್ಷದ ಕೆಲವು ಸದಸ್ಯರ ನಡುವೆ ಭಿನ್ನಮತ ಶುರವಾಗಿದೆ ಎಂದು ಹೇಳಲಾಗಿತ್ತು. ಇದಕ್ಕೆ ಪ್ರತಿಕ್ರಿಯಿಸಿರುವ ಸ್ಟ್ಯಾಲಿನ್, ಪಕ್ಷದಲ್ಲಿ ಯಾವುದೇ ಭಿನ್ನಭಿಪ್ರಾಯವಿಲ್ಲ. ಡಿಎಂಕೆ ಪಕ್ಷದ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಸ್ಪರ್ಧಿಸಲ್ಲ ಎಂದು ಸ್ಪಷ್ಟನೇ ನೀಡಿದ್ದಾರೆ.