ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ 
ದೇಶ

ಶಾರದಾ ಚಿಟ್‌ಫಂಡ್: ಸುಪ್ರೀಂಗೆ ಅರ್ಜಿ ಸಲ್ಲಿಸಲು ದೀದಿ ನಿರ್ಧಾರ

ಬಹುಕೋಟಿ ಶಾರದಾ ಚಿಟ್‌ಫಂಡ್ ಹಗರಣ ವಿಚಾರಣೆಯನ್ನು ಸುಪ್ರೀಂಕೋರ್ಟ್‌ಗೆ ತೆಗೆದುಕೊಂಡು...

ಕೋಲ್ಕತ್ತಾ: ಬಹುಕೋಟಿ ಶಾರದಾ ಚಿಟ್‌ಫಂಡ್ ಹಗರಣ ವಿಚಾರಣೆಯನ್ನು ಸುಪ್ರೀಂಕೋರ್ಟ್‌ಗೆ ತೆಗೆದುಕೊಂಡು ಹೋಗಲು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರ್ಧರಿಸಿದ್ದಾರೆ.

ಹಗರಣದಲ್ಲಿ ಮಮತಾ ಬ್ಯಾನರ್ಜಿ ಅವರೂ ಪ್ರಮುಖ ಫಲಾನುಭವಿಯಾಗಿದ್ದು, ಹಗರಣದ ತನಿಖೆ ಮೇಲೆ ತಮ್ಮ ಅಧಿಕಾರ ಪ್ರಭಾವ ಬೀರಲು ಯತ್ನಿಸುತ್ತಿದ್ದಾರೆ ಎಂಬ ವಿರೋಧ ಪಕ್ಷದ ಆರೋಪವನ್ನು ತಳ್ಳಿಹಾಕುವ ಸಲುವಾಗಿ ದೀದಿ ಈ ರೀತಿಯ ನಿರ್ಧಾರವನ್ನು ಕೈಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಶಾರದಾ ಗ್ರೂಪ್ ನಡೆಸುತ್ತಿರುವ ಚಿಟ್‌ಫಂಡ್ ಸಮೂಹ ಸಂಸ್ಥೆಯಾಗಿರುವ ಶಾರದಾ ಗ್ರೂಪ್ ಮೀಡಿಯಾ ನಡೆಸುತ್ತಿದ್ದ ಪತ್ರಿಕೆ ಮತ್ತಿತರ ವಿಭಾಗಗಳ ಕೆಲಸಗಾರರಿಗೆ ವೇತನ ನೀಡಲಾಗಲಿಲ್ಲ.ಅಕ್ರಮ ವ್ಯವಹಾರಗಳ ಮೂಲಕ ಉದ್ಯೋಗಿಗಳನ್ನು ವಂಚಿಸಲಾಗುತ್ತಿದೆ ಎಂಬ ಮಾಹಿತಿ 2013ರಲ್ಲಿ ಬೆಳಕಿಗೆ ಬಂತು. ಅದೇ ವೇಳೆಗೆ ಬಂಗಾಳ, ಒಡಿಶಾ, ತ್ರಿಪುರಾ, ಜಾರ್ಖಂಡ್ ಮತ್ತು ಅಸ್ಸಾಂನ ಸಾವಿರಾರು ಜನರು ತಾವೂ ಹೂಡಿದ್ದ ಹಣ ವಾಪಸ್ ನೀಡುವಂತೆ ಆಗ್ರಹಿಸಿ ಶಾರದಾ ಚಿಟ್‌ಫಂಡ್ ವಿರುದ್ಧ ಪ್ರತಿಭಟನೆಗಿಳಿದರು. ಈ ಆರೋಪಗಳ ಸಂಬಂಧ ಪಶ್ಚಿಮ ಬಂಗಾಳ ಸರಕಾರ ತನಿಖೆಗೆ ಆಯೋಗವನ್ನೂ ರಚಿಸಿತ್ತು. 2013ರ ಏಪ್ರಿಲ್ 23 ರಂದು ಶಾರದಾ ಗ್ರೂಪ್ ಅಧ್ಯಕ್ಷ ಸುದಿಪ್ತ ಸೇನ್ ಹಾಗೂ ಅವರ ಇಬ್ಬರು ನಿಕಟ ವರ್ತಿಗಳ ಸಹಿತ ಕಾಶ್ಮೀರದ ಸೊನ್ಮಾರ್ಗ್‌ನಲ್ಲಿ ಬಂಧಿಸಲಾಗಿತ್ತು.

ಪಶ್ಚಿಮ ಬಂಗಾಳ, ಒಡಿಸ್ಸಾ, ಅಸ್ಸಾಂ ಮತ್ತು ತ್ರಿಪುರಾದಲ್ಲಿ ನಡೆದ ಶಾರದಾ ಚಿಟ್ ಫಂಡ್ ಹಗರಣವನ್ನು ಸಿಬಿಐ ತನಿಖೆಗೆ ಒಳಪಡಿಸಲು ಸುಪ್ರೀಂಕೋರ್ಟ್ ಆದೇಶ ನೀಡಿತ್ತು. ನಂತರ ರಾಜ್ಯ ಕೊಂಡಿಗಳನ್ನು ಹೊಂದಿರುವ ಈ ಅವ್ಯವಹಾರಗಳಲ್ಲಿ ರಾಜಕಾರಣಿಗಳೂ ಸೇರಿದಂತೆ ಪ್ರಭಾವಿ ವ್ಯಕ್ತಿಗಳು ಒಳಗೊಂಡಿರುವ ಸಾಧ್ಯತೆ ಇದೆ. ಅಕ್ರಮಗಳ ಒಳಸಂಚು, ಅದರ ಆಯಾಮ, ಹಣದ ವಹಿವಾಟುಗಳ ಬಗ್ಗೆ ತನಿಖೆ ನಡೆಸುವಲ್ಲಿ ಅಥವಾ ಆಸ್ತಿಪಾಸ್ತಿ ವಶಪಡಿಸಿಕೊಳ್ಳುವಲ್ಲಿ ಪಶ್ಚಿಮ ಬಂಗಾಳ ಪೊಲೀಸರು ಇದುವೆರೆಗೂ ಯಾವುದೇ ಪ್ರಗತಿ ಸಾಧಿಸಿಲ್ಲ ಹಾಗಾಗಿ ಈ ಬಗ್ಗೆ ಸ್ವತಂತ್ರ ಸಂಸ್ಥೆಯಿಂದ ತನಿಖೆ ನಡೆಸುವುದು ಸೂಕ್ತ ಎಂದು ಅಭಿಪ್ರಾಯಪಟ್ಟಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT