ಪಿಡಿಪಿ ನಾಯಕಿ ಮೆಹಬೂಬಾ ಮುಫ್ತಿ 
ದೇಶ

ಸರ್ಕಾರ ರಚನೆ: ಬಿಜೆಪಿ ಜತೆ ಚರ್ಚೆ ಇಲ್ಲ

ಬಿಜೆಪಿ ಜತೆಗೂಡಿ ಸರ್ಕಾರ ರಚಿಸುವ ಬಗ್ಗೆ ಪಿಡಿಪಿ ನಾಯಕಿ ದಿನಕ್ಕೊಂದು ಹೇಳಿಕೆ...

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಬಿಜೆಪಿ ಜತೆಗೂಡಿ ಸರ್ಕಾರ ರಚಿಸುವ ಬಗ್ಗೆ ಪಿಡಿಪಿ ನಾಯಕಿ ದಿನಕ್ಕೊಂದು ಹೇಳಿಕೆ ನೀಡಲಾರಂಭಿಸಿದ್ದಾರೆ.

ಸೋಮವಾರದಿಂದ ಅಧಿಕೃತವಾಗಿ ಈ ಬಗ್ಗೆ ಮಾತುಕತೆ ನಡೆಸಲಾಗುತ್ತದೆ ಎಂದು ಹೇಳಿದ್ದರು. ಆದರೆ ಭಾನುವಾರ ತಮ್ಮ ನಿಲುವು ಬದಲಾಯಿಸಿದ್ದು, ಅಂಥ ಯೋಚನೆಯೇ ಇಲ್ಲ. ಆ ನಿಟ್ಟಿನಲ್ಲಿ ಚಿಂತನೆಯೇ ನಡೆದಿಲ್ಲ. ಜಮ್ಮು-ಕಾಶ್ಮೀರದ ಜನರಿಗೆ ನೀಡಿದ ವಾಗ್ದಾನ ಮರೆಯುವುದಿಲ್ಲ ಎಂದಿದ್ದಾರೆ. ಸರ್ಕಾರ ರಚನೆ ನಿಟ್ಟಿನಲ್ಲಿ ಪಕ್ಷಕ್ಕೆ ಯಾವುದೇ ಆತುರ ಇಲ್ಲ ಎಂದಿದ್ದಾರೆ ಮೆಹಬೂಬಾ.

ಭಾನುವಾರ ನಡೆದ ಪಕ್ಷದ ಶಾಸಕರ ಸಭೆಯಲ್ಲಿ ಬಿಜೆಪಿ ಜತೆಗಿನ ಮೈತ್ರಿಯಿಂದಾಗಿ ಪಕ್ಷದ ವರ್ಚಸ್ಸು ಮತ್ತು ನಿಲುವುಗಳ ಬಗ್ಗೆ ಕಾಶ್ಮೀರ ಕಣಿವೆಯ ಜನರಲ್ಲಿ ತಪ್ಪು ಭಾವನೆ ಮೂಡಿಸುವ ಸಾಧ್ಯತೆ ಇದೆ ಎಂದು ಮತ್ತೊಮ್ಮೆ ಮೆಹಬೂಬಾ ಮುಫ್ತಿ ಮತ್ತು ಮುಫ್ತಿ ಮೊಹಮ್ಮದ್ ಸಯ್ಯೀದ್‌ಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.

ಜತೆಗೆ ಶಾಸಕರ ಕ್ಷೇತ್ರಗಳಲ್ಲಿ ಪ್ರತಿಕೂಲ ಪರಿಸ್ಥಿತಿ ಮೂಡುವಂತಾದೀತು ಎಂದು ಎಚ್ಚರಿಕೆ ನೀಡಿದ್ದರು. ಇದಾದ ಬಳಿಕ ಪಿಡಿಪಿ ನಾಯಕಿ ಉಲ್ಟಾ ಹೊಡೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜ್ಞಾನೇಶ್ ಕುಮಾರ್ ನೆರವಿನಿಂದ ದೇಶವನ್ನು 'ಹೈಜಾಕ್' ಮಾಡಿದ ಮೋದಿ, ಶಾ, ಭಾಗವತ್‌ರನ್ನು ಸುಮ್ಮನೆ ಬಿಡಲ್ಲ; ರಾಹುಲ್ ಗಾಂಧಿ ಗುಡುಗು!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

ಹೆದ್ದಾರಿಗಳಲ್ಲಿ ನಿಲ್ಲಿಸಿರುವ ವಾಹನಗಳ ಎಲೆಕ್ಟ್ರಾನಿಕ್ ಟ್ರ್ಯಾಕಿಂಗ್ ಸಾಧ್ಯವಾಗುತ್ತಿಲ್ಲವೇಕೆ- NHAI ಗೆ ಸುಪ್ರೀಂ ಕೋರ್ಟ್

ಗಣೇಶ ವಿಸರ್ಜನೆ ವಿಚಾರವಾಗಿ ಜಿಲ್ಲಾಧಿಕಾರಿ - SP ನಡುವೆ ಜಟಾಪಟಿ; 'ಹೇಗೆ ರಿಪೇರಿ ಮಾಡಬೇಕೆಂದು ಗೊತ್ತಿದೆ' ಎಂದ ಎಚ್‌ಡಿ ರೇವಣ್ಣ

ಹೆಲಿಕಾಪ್ಟರ್‌ನಿಂದ ಉಳಿಯುವಾಗ 2 ತಿಂಗಳ ಮಗುವಿನೊಂದಿಗೆ ಎಡವಿದ ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಪತ್ನಿ ಉಷಾ, Video