ಪ್ರಧಾನಿ ನರೇಂದ್ರ ಮೋದಿ 
ದೇಶ

'ಘರ್‌ವಾಪಸಿ'ಗೆ ಮೋದಿ ವಿರೋಧ ಇಲ್ಲ: ಕೇರಳ ಬಿಜೆಪಿ

ಮರು ಮತಾಂತರ 'ಘರ್‌ವಾಪಸಿ' ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ವಿರೋಧ ಇಲ್ಲ...

ಕೊಚ್ಚಿ: ಮರು ಮತಾಂತರ 'ಘರ್‌ವಾಪಸಿ' ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ವಿರೋಧ ಇಲ್ಲ ಎಂದು ಎಂದು ಕೇರಳ ರಾಜ್ಯ ಬಿಜೆಪಿ ಉಪಾಧ್ಯಕ್ಷ ಎಂಟಿ ರಮೇಶ್ ಹೇಳಿದ್ದಾರೆ.

ವಿವಾದಾತ್ಮಕ ಮರು ಮತಾಂತರ 'ಘರ್‌ವಾಪಸಿ' ಕಾರ್ಯಕ್ರಮ ಕುರಿತು ಮಾತನಾಡಿದ ಅವರು, ಈ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಅವರ ವಿರೋಧವಿಲ್ಲ ಎಂದು ಸ್ಪಷ್ಟನೇ ನೀಡಿದ್ದಾರೆ.

ಘರ್ ವಾಪಸಿ ಕಾರ್ಯಕ್ರಮ ಹೊಸ ವಿದ್ಯಾಮಾನವೇನಲ್ಲ. ಹಿಂದೂ ಧರ್ಮದಿಂದ ಅನ್ಯ ಧರ್ಮಕ್ಕೆ ಮತಾಂತರಗೊಂಡಿದ್ದವರನ್ನು ಮತ್ತೆ ಹಿಂದೂ ಧರ್ಮಕ್ಕೆ ಮತಾಂತರ ಮಾಡಲಾಗುತ್ತಿದೆ. ಇದು ಹಿಂದಿನಿಂದಲೂ ನಡೆದು ಬಂದಿದೆ.

ಅನ್ಯ ಧರ್ಮಕ್ಕೆ ಬಲವಂತವಾಗಿ ಮತಾಂತಗೊಂಡಿದ್ದವರನ್ನು ಮತ್ತೆ ಹಿಂದೂ ಧರ್ಮಕ್ಕೆ ಮತಾಂತರ ಮಾಡಲಾಗುತ್ತಿದೆ. ಸ್ವಇಚ್ಛೆಯಿಂದ ಈ ಮರುಮತಾಂತರ ನಡೆಯುತ್ತಿದೆ. ಮರು ಮತಾಂತರ ನ್ಯಾಯಸಮ್ಮತವಲ್ಲ ಎಂದು ಹೇಗೆ ಹೇಳಲಾಗುತ್ತದೆ. ಮತಾಂತರ ಕಾನೂನು ಬದ್ಧವಾಗಿದ್ದರೆ, ಮರು ಮತಾಂತರವು ಕಾನೂನು ಬದ್ಧವಾಗಿರುತ್ತದೆ ಎಂದು ಹೇಳಿದ್ದಾರೆ.

ಸ್ವಇಚ್ಛೆಯಿಂದ ತಮ್ಮ ಧರ್ಮಕ್ಕೆ ಹಿಂದಿರುಗಿ ಬಂದರೆ, ಇದರಲ್ಲಿ ಕಾನೂನು ಉಲ್ಲಂಘನೆಯಾಗುವುದಿಲ್ಲ. ಬಲವಂತವಾಗಿ ಮತಾಂತರ ಮಾಡಿದರೆ ಮಾತ್ರ ಕಾನೂನು ಉಲ್ಲಂಘನೆಯಾಗುತ್ತದೆ.

ಧರ್ಮ ಬಿಟ್ಟು ಹೋಗಿದ್ದವರು ಮತ್ತೆ ಧರ್ಮಕ್ಕೆ ವಾಪಾಸ್ಸಾದರೆ ಯಾವುದೇ ತಪ್ಪಿಲ್ಲ, ಹಾಗೆ ಸಮಾಜಕ್ಕೆ ಧಕ್ಕೆಯಾಗುವುದಿಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್