ಮುಖ್ಯಮಂತ್ರಿ ಸಿದ್ಧರಾಮಯ್ಯ 
ದೇಶ

ಜಾತಿವಾರು ಜನಗಣತಿ ಏ.11 ರಿಂದ

ರಾಜ್ಯದಲ್ಲಿ ಜಾತಿವಾರು ಜನಗಣತಿ ಏ.11 ರಿಂದ ಏ.30ರವರೆಗೆ ನಡೆಯಲಿದೆ...

ಬೆಂಗಳೂರು: ರಾಜ್ಯದಲ್ಲಿ ಜಾತಿವಾರು ಜನಗಣತಿ ಏ.11 ರಿಂದ ಏ.30ರವರೆಗೆ ನಡೆಯಲಿದೆ. ನಂತರ ಎರಡು ತಿಂಗಳಲ್ಲಿ ವರದಿ ಸಿದ್ಧವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.

ಸೋಮವಾರ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾಧಿಕಾರಿಗಳು ಹಾಗೂ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಮಾರ್ಗಸೂಚಿ ಸಭೆಯ ನಂತರ ಅವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.

1931ರಲ್ಲಿ ಜಾತಿವಾರು ಜನಗಣತಿ ನಡೆದಿತ್ತು. ಅದರ ಆಧಾರದಲ್ಲೇ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ. ಹೀಗಾಗಿ ಈ ಗಣತಿಯನ್ನು ನಡೆಸಲಾಗುತ್ತಿದೆ. ಸುಮಾರು 1.76 ಲಕ್ಷ ಗಣತಿದಾರರು ಕೆಲಸ ನಿರ್ವಹಿಸಲಿದ್ದಾರೆ. ಶಿಕ್ಷಕರೂ ಈ ಗಣತಿಯಲ್ಲಿ ಭಾಗವಹಿಸಲಿದ್ದಾರೆ ಎಂದರು.

ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗ ಕೈಗೊಳ್ಳಲಿರುವ ಈ ಜಾತಿ ಗಣತಿಗೆ 175 ಕೋಟಿ ವೆಚ್ಚವಾಗಲಿದೆ. ಪ್ರಸಕ್ತ ಸಾಲಿನ ಪೂರಕ ಆಯವ್ಯಯದಲ್ಲಿ 84 ಕೋಟಿ ಮೀಸಲಿರಿಸಲು ಉದ್ದೇಶಿಸಲಾಗಿದೆ. ಅಲ್ಲದೆ, 2015-16ನೇ ಸಾಲಿನ ಆಯವ್ಯಯದಲ್ಲಿ 58ಕೋಟಿ ಒದಗಿಸಲು ಯೋಜಿಸಲಾಗಿದೆ ಎಂದು ಸಮಾಜ ಕಲ್ಯಾಣ ಖಾತೆ ಸಚಿವ ಎಚ್. ಆಂಜನೇಯ ತಿಳಿಸಿದರು.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿ ಒಳಗೊಂಡಂತೆ ರಾಜ್ಯದ ಎಲ್ಲೆಡೆ ಸಮೀಕ್ಷಾ ಕಾರ್ಯಕ್ಕೆ 1,26,928 ಗಣತಿ ಬ್ಲಾಕ್‌ಗಳನ್ನು ಗುರುತಿಸಲಾಗಿದೆ. ಸಮೀಕ್ಷೆಯಲ್ಲಿ 2,588 ಮಾಸ್ಟರ್ ಟ್ರೈನರ್‌ಗಳು, 22,190 ಮೇಲ್ವಿಚಾರಕರು, 1,33,140 ಗಣತಿದಾರರು ಒಳಗೊಂಡಂತೆ 1,75,288 ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯನಿರ್ವಹಿಸಲಿದ್ದಾರೆ ಎಂದರು.

ಜನವರಿ ಎರಡನೇ ವಾರ ಸಮೀಕ್ಷೆ ಕುರಿತು ರಾಜ್ಯ ಮಟ್ಟದ ಕಾರ್ಯಾಗಾರ ಹಾಗೂ ಅಭಿಶಿಕ್ಷಣ ತರಬೇತಿ ನಡೆಯಲಿದೆ. ನಂತರ, ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಹಾಗೂ ಫೆಬ್ರವರಿ ಮೊದಲನೇ ವಾರದಲ್ಲಿ ಮೇಲ್ವಿಚಾರಕರು ಹಾಗೂ ಗಣತಿದಾರರಿಗೆ ತರಬೇತಿ ನೀಡಲಾಗುವುದು. ಫೆಬ್ರವರಿ ಎರಡನೇ ವಾರದಲ್ಲಿ ಗಣತಿ ಬ್ಲಾಕ್‌ಗೆ ಭೇಟಿ ನೀಡಿ, ಬ್ಲಾಕ್‌ನ ಗಡಿ ಗುರುತಿಸಿ, ಮನೆ ಮನೆ ಪಟ್ಟಿ ಸಿದ್ಧ ಪಡಿಸಿ ಪ್ರಾಯೋಗಿಕವಾಗಿ ಕುಟುಂಬಗಳ ಅಣಕು ಸಮೀಕ್ಷಾ ಕಾರ್ಯ ಪ್ರಾರಂಭವಾಗಲಿದೆ.

ಏಪ್ರಿಲ್ 11 ರಿಂದ ಮನೆ ಮನೆ ಸಮೀಕ್ಷೆ ಪ್ರಾರಂಭವಾಗಲಿದೆ. ಪ್ರತಿ ಮನೆಗೂ ಭೇಟಿ ನೀಡುವ ಗಣತಿದಾರರು ಕುಟುಂಬದ ಎಲ್ಲ ಸದಸ್ಯರಿಗೆ ಸಂಬಂಧಿಸಿದಂತೆ 55 ಅಂಶಗಳುಳ್ಳ ಪ್ರಶ್ನಾವಳಿಗೆ ಮಾಹಿತಿ ಪಡೆಯುತ್ತಾರೆ. ಒಂದು ಮನೆಯ ಮಾಹಿತಿ ಸಂಗ್ರಹಿಸಲು 45 ನಿಮಿಷ ಬೇಕಾಗಬಹುದು ಎಂದು ಅಂದಾಜಿಸಲಾಗಿದೆ.

ಈ ಸಮೀಕ್ಷೆಯು ಮುಂದಿನ ದಿನಗಳಲ್ಲಿ ಯೋಜನೆಗಳನ್ನು ರೂಪಿಸಲು ದಿಕ್ಸೂಜಿಯಾಗಲಿದೆ. ಸಮೀಕ್ಷೆಗೆ ಶಿಕ್ಷಕರ ಸೇವೆ ಬಳಸಲು ಇದ್ದ ಕಾನೂನು ತೊಡಕು ನಿವಾರಿಸಲಾಗಿದೆ. ರಜಾ ಅವಧಿಯಲ್ಲಿ ನಡೆಯುವುದರಿಂದ ಶೈಕ್ಷಣಿಕ ಚಟುವಟಿಕೆಗಳಿಗೆ ಅಡ್ಡಿ ಆಗುವುದಿಲ್ಲ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT