ಮುಂಬೈ ವಿಮಾನ ನಿಲ್ದಾಣದಲ್ಲಿ ಪತ್ತೆಯಾದ ನೋಟ್ 
ದೇಶ

'ಜ.10ಕ್ಕೆ ಇಸಿಸ್ ದಾಳಿ': ಮುಂಬೈ ವಿಮಾನ ನಿಲ್ದಾಣದಲ್ಲಿ ನೋಟ್ ಪತ್ತೆ

ಜನವರಿ 10ರಂದು ದಾಳಿ ಮಾಡುವುದಾಗಿ ಬೆದರಿಕೆ ಹಾಕಿದೆ ಕೈ ಬರಹದ...

ಮುಂಬೈ: ಜನವರಿ 10ರಂದು ದಾಳಿ ಮಾಡುವುದಾಗಿ ಬೆದರಿಕೆ ಹಾಕಿದೆ ಕೈ ಬರಹದ ನೋಟ್ವೊಂದು ಬುಧವಾರ ಮುಂಬೈನ ವಿಮಾನ ನಿಲ್ದಾಣದಲ್ಲಿ ಪತ್ತೆಯಾಗಿದ್ದು, ತೀವ್ರ ಕಟ್ಟೆಚ್ಚರ ವಿಧಿಸಲಾಗಿದೆ.

ಮುಂಬೈನ ಛತ್ರಪತಿ ಶಿವಾಜಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರ ಬಳಿ ಇರುವ ಶೌಚಾಲಯದಲ್ಲಿ ಈ ನೋಟ್ ಪತ್ತೆಯಾಗಿದ್ದು, ಅದರಲ್ಲಿ  “ATTECK BY ISIS DATE 10/01/15 (sic)”. ಎಂದು ಕೈಯಿಂದ ಗೋಡೆಯ ಮೇಲೆ ಗೀಚಲಾಗಿದೆ.

ವಿಮಾನ ನಿಲ್ದಾಣದ ಭದ್ರತಾ ಉಸ್ತುವಾರಿ ಹೊತ್ತಿರುವ ಸಿಐಎಸ್ಎಫ್, ನಿಲ್ದಾಣದಲ್ಲಿರುವ ಎಲ್ಲಾ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದೆ. ಅಲ್ಲದೆ ಈ ಸಂಬಂಧ ವಿಮಾನ ನಿಲ್ದಾಣದ ಸ್ವಚ್ಛತಾ ಸಿಬ್ಬಂದಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ.

ಟರ್ಮಿನಲ್ ಎರಡರಲ್ಲಿರುವ ಶೌಚಾಲಯವನ್ನು ಸಾಮಾನ್ಯವಾಗಿ ವಿಮಾನದಲ್ಲಿ ಆಗಮಿಸುವ ಪ್ರಯಾಣಿಕರು ಬಳಸುತ್ತಾರೆ. ಹೀಗಾಗಿ ವಿಮಾನದಲ್ಲಿ ಬಂದಿಳಿದ ವ್ಯಕ್ತಿಗಳೇ ಈ ದುಷ್ಕೃತ್ಯವನ್ನು ಎಸಗಿರಬಹುದು ಎಂದು ಶಂಕಿಸಲಾಗಿದೆ.

ಈ ಬೆದರಿಕೆ ನೋಟ್ನ ಮಾಹಿತಿಯನ್ನು ಸಿಐಎಸ್ಎಫ್ ಮುಂಬೈ ಪೊಲೀಸರಿಗೆ ನೀಡಿದ್ದು, ಪೊಲೀಸರಿ ಮುಂಬೈಯಾದ್ಯಂತ ಬಿಗಿ ಭದ್ರತೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT