ದೇಶ

ಸುನಂದಾ ಕೊಲೆ ಪ್ರಕರಣ: ಎಸ್ ಐಟಿಯಿಂದ ತನಿಖೆ

ಪತ್ನಿ ಸುನಂದಾ ಪುಷ್ಕರ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ...

ನವದೆಹಲಿ: ಕೇಂದ್ರ ಮಾಜಿ ಸಚಿವ ಶಶಿ ತರೂರ್ ಅವರ ಪತ್ನಿ ಸುನಂದಾ ಪುಷ್ಕರ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ವಿಶೇಷಾ ತನಿಖಾ ತಂಡ(ಎಸ್ ಐಟಿ) ರಚಿಸಲಾಗಿದೆ ಎಂದು ದೆಹಲಿ ಪೊಲೀಸರು ಬುಧವಾರ ತಿಳಿಸಿದ್ದಾರೆ.

ನಿನ್ನೆಯಷ್ಟೆ ದೆಹಲಿ ಸರೋಜಿನಿ ನಗರ ಪೊಲೀಸರು ಸುನಂದಾ ಪುಷ್ಕರ್ ಅಸಹಜ ಸಾವು ಎಂದು ಹೇಳಿದ್ದು, ಪ್ರಕರಣವನ್ನು ಐಪಿಸಿ 302 ಅಡಿ ಕೊಲೆ ಎಂದು ದಾಖಲಿಸಿಕೊಂಡಿದ್ದರು. ಎಫ್‌ಐಆರ್‌ನಲ್ಲಿ ಯಾರ ಹೆಸರನ್ನು ಪ್ರಸ್ತಾಪಿಸದೇ, ಅಪರಿಚಿತ ವ್ಯಕ್ತಿಗಳಿಂದ ಕೊಲೆ ನಡೆದಿದೆ ಎಂದು ನಮೂದಿಸಿಕೊಂಡಿದ್ದಾರೆ.

ದೆಹಲಿ ಉಪ ಪೊಲೀಸ್ ಆಯುಕ್ತ ಪ್ರೇಮನಾಥ್ ಉಸ್ತುವಾರಿಯಲ್ಲಿ ವಿಶೇಷ ತನಿಖಾ ತಂಡ(ಎಸ್‌ಐಟಿ)ವನ್ನು ರಚಿಸಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಶಶಿ ತರೂರ್ ಅವರನ್ನು ಪೊಲೀಸರು ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ ಎಂಬ ಮಾಹಿತಿ ಸಿಕ್ಕಿದೆ.

ಕಳೆದ ಜನವರಿ 17ರಂದು ದೆಹಲಿಯ ಪಂಚತಾರಾ ಹೋಟೆಲೊಂದರಲ್ಲಿ 52 ವರ್ಷದ ಸುನಂದಾ ಶಂಕಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದರು. ದೆಹಲಿಯ ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ಡಿ.29ರಂದು ನೀಡಿರುವ ಅಂತಿಮ ವೈದ್ಯಕೀಯ ವರದಿ 'ಸುನಂದಾ ವಿಷ ಪ್ರಾಶನದಿಂದ ಸಾವನ್ನಪ್ಪಿದ್ದು ಅಸಹಜ ಸಾವು' ಎಂದು ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಐದು ದಿನ ಇರಾನ್ Power Plant ಗಳ ಮೇಲೆ ದಾಳಿ ಮಾಡಲ್ಲ..': Trump ತಾತ್ಕಾಲಿಕ ಕದನ ವಿರಾಮ ಘೋಷಣೆ! ಮಾತುಕತೆ ನಿರಾಕರಿಸಿದ ಇರಾನ್

West Asia Crisis: ಮುಳುಗಿದ D-Street; 13.5 ಲಕ್ಷ ಕೋಟಿ ನಿರ್ನಾಮ!

ಇರಾನ್ ಮೇಲಿನ ದಾಳಿ ಐದು ದಿನ ತಾತ್ಕಾಲಿಕ ಸ್ಥಗಿತ: ಶಾಂತಿ ಸ್ಥಾಪನೆಗಾಗಿ ಪಾಕಿಸ್ತಾನ, ಟರ್ಕಿ, ಈಜಿಪ್ಟ್ ಮಧ್ಯಸ್ಥಿಕೆ!

ಕಾಂಗ್ರೆಸ್ ಪಕ್ಷದಿಂದ ರಾಜ್ಯಸಭೆಗೆ ಉಮರ್ ಖಾಲಿದ್‌ ನಾಮನಿರ್ದೇಶನಕ್ಕೆ ಮುಸ್ಲಿಂ ಸಂಘಟನೆಗಳ ಒತ್ತಾಯ!

ಭಾರತ vs ಪಾಕಿಸ್ತಾನ ಅಲ್ಲ, ಇನ್ಮುಂದೆ Afghanistan vs Pakistan: ನೆರೆ ರಾಷ್ಟ್ರದ Rivalry ಬಿಚ್ಚಿಟ್ಟ ಆಫ್ಘನ್ ಆಟಗಾರ!

SCROLL FOR NEXT