ಟರ್ಕಿ ನಗರದಲ್ಲಿ ಆತ್ಮಹತ್ಯಾ ಬಾಂಬ್ ದಾಳಿ 
ದೇಶ

ಆತ್ಮಹತ್ಯಾ ಬಾಂಬ್ ದಾಳಿಗೆ ಪೊಲೀಸ್ ಬಲಿ

ಮಹಿಳಾ ಆತ್ಮಹತ್ಯಾ ಬಾಂಬರ್ ದಾಳಿಗೆ ಓರ್ವ ಭದ್ರತಾ ಪೊಲೀಸ್ ಸಾವನ್ನಪ್ಪಿದ್ದು...

ಇಸ್ತಾನ್‌ಬುಲ್: ಮಹಿಳಾ ಆತ್ಮಹತ್ಯಾ ಬಾಂಬರ್ ದಾಳಿಗೆ ಓರ್ವ ಭದ್ರತಾ ಪೊಲೀಸ್ ಸಾವನ್ನಪ್ಪಿದ್ದು, ಮತ್ತೋರ್ವ ಸಿಬ್ಬಂದಿ ಗಾಯಗೊಂಡಿರುವ ಘಟನೆ ಟರ್ಕಿ ನಗರದಲ್ಲಿ ನಡೆದಿದೆ.

ಬ್ಲೂ ಮಸೀದಿ, ಸೋಫಿಯಾ ಮ್ಯೂಸಿಯಂ ಹಾಗೂ ಇನ್ನಿತರೆ ಪ್ರವಾಸಿ ತಾಣಗಳ ಮಧ್ಯೆ ಇದ್ದ ಪೊಲೀಸ್ ಠಾಣೆಗೆ ಬಂದ ಅನಾಮಿಕ ಮಹಿಳೆಯೊಬ್ಬಳು ತನ್ನ ಪರ್ಸ್ ಕಳೆದುಹೋಗಿದೆ ಎಂದು ಹೇಳಿದ್ದಾಳೆ. ನಂತರ ಇದ್ದಕ್ಕಿದ್ದಂತೆ ತನ್ನ ಬಳಿ ಇದ್ದ ಸೂಸೈಡ್ ಬಾಂಬ್‌ನ್ನು ಸ್ಫೋಟಿಸಿದ್ದಾಳೆ. ಈ ವೇಳೆ ಪೊಲೀಸ್ ಅಧಿಕಾರಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬ ಅಧಿಕಾರಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ದಾಳಿ ವೇಳೆ ಗಾಯಗೊಂಡಿದ್ದ ಅಧಿಕಾರಿಯೊಬ್ಬರನ್ನು ರಕ್ಷಿಸಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ದಾಳಿ ಕುರಿತಂತೆ ಈ ವರೆಗೂ ಯಾವುದೇ ಭಯೋತ್ಪಾದಕ ಸಂಘಟನೆಗಳು ಹೊಣೆಯನ್ನು ಹೊತ್ತುಕೊಂಡಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!