ದೇಶ

ಗಾಂಧಿಗೆ 'ಸಾಲ್ಟ್ ಮೌಂಟೇನ್‌' ಸ್ಮಾರಕ ಅರ್ಪಿಸಿದ ಮೋದಿ

'ಸಾಲ್ಟ್ ಮೌಂಟೇನ್‌' ಸ್ಮಾರಕವನ್ನು ಪ್ರಧಾನಿ ನರೇಂದ್ರ ಮೋದಿ ಗುರುವಾರ ಬೆಳಿಗ್ಗೆ...

ಗಾಂಧಿನಗರ: 'ಸಾಲ್ಟ್ ಮೌಂಟೇನ್‌' ಸ್ಮಾರಕವನ್ನು ಪ್ರಧಾನಿ ನರೇಂದ್ರ ಮೋದಿ ಗುರುವಾರ ಬೆಳಿಗ್ಗೆ ಉದ್ಘಾಟಿಸಿದ್ದಾರೆ.

ಮಹಾತ್ಮಾ ಗಾಂಧಿ ಕಾಂಪ್ಲೆಕ್ಸ್ ಬಳಿ ನೂತನವಾಗಿ ನಿರ್ಮಿಸಲಾದ ಸಾಲ್ಟ್ ಮೌಂಟೇನ್ ಸ್ಮಾರಕವನ್ನು ಮೋದಿ ಉದ್ಘಾಟಿಸಿದ್ದು, ಇದನ್ನು ಮಹಾತ್ಮಾ ಗಾಂಧಿಗೆ ಅರ್ಪಿಸಿದ್ದಾರೆ.

ಮಹಾತ್ಮಾ ಗಾಂಧಿ ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ಮರಳಿದ ದಿನದ ನೆನಪಿಗಾಗಿ ಜನವರಿ 7-9ರವರೆಗೆ ಮಹಾತ್ಮಾ ಗಾಂಧಿ ಕಾಂಪ್ಲೆಕ್ಸ್‌ನಲ್ಲಿ ಮೂರು ದಿನಗಳ ಪ್ರವಾಸಿ ಭಾರತೀಯ ಕಾರ್ಯಕ್ರಮ ನಡೆಯುತ್ತಿದೆ. ನಿನ್ನೆ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

13ನೇ ಪ್ರವಾಸಿ ಭಾರತೀಯ ದಿವಸ್ ಕಾರ್ಯಕ್ರಮ ಇದಾಗಿದ್ದು, ಗಾಂಧಿ ಜೀವನ ಚರಿತ್ರೆ ಚಿತ್ರಗಳು, ಗಾಂಧಿ ಕುಟೀರ ಸೇರಿದಂತೆ ಇತರೆ ಪ್ರದರ್ಶನಗಳನ್ನು ಮೋದಿ ವೀಕ್ಷಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪರಸ್ಪರ ಸಂಪರ್ಕ ಬೆಳೆಸುವ ಹಾಗೂ ವಾಣಿಜ್ಯ ಸಂಬಂಧವನ್ನು ದೃಢಗೊಳಿಸುವ ನಿಟ್ಟಿನಲ್ಲಿ ಭಾರತೀಯ ಮೂಲದ ವ್ಯಕ್ತಿಗಳನ್ನು ಜತೆಗೂಡಿಸುವ ವಾರ್ಷಿಕ ಕಾರ್ಯಕ್ರಮವಾದ 13ನೇ ಪ್ರವಾಸಿ ಭಾರತೀಯ ದಿವಸ್‌ನಲ್ಲಿ 4,000ಕ್ಕಿಂತಲೂ ಹೆಚ್ಚು ಜನಪ್ರತಿನಿಧಿಗಳು ಭಾಗವಹಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಕ್ಷದ ಹಿತಕ್ಕಾಗಿ ನಾಗೇಂದ್ರ ಯಾವುದೇ ತ್ಯಾಗಕ್ಕೂ ಸಿದ್ಧ, ಆದ್ರೆ...: ಹೈಕಮಾಂಡ್ ಭೇಟಿ ಬಳಿಕ CM ಡಿಕೆ ಶಿವಕುಮಾರ್

Nepal Floods: ನೇಪಾಳ ಭೀಕರ ಪ್ರವಾಹಕ್ಕೆ ಚೀನಾದ ನಿರ್ಮಾಣ ಕಾರ್ಯವೇ ಕಾರಣ?

‘ನೇಪಾಳಿಗರೇ, ನೀವು ಒಂಟಿಯಲ್ಲ, ನಾನು ನಿಮ್ಮೊಂದಿಗೆ ನಿಲ್ಲುತ್ತೇನೆ’: ಪ್ರವಾಹ ಪೀಡಿತ ಸಂತ್ರಸ್ತರಿಗೆ ನೆರವಿನ ಹಸ್ತ ಚಾಚಿದ ಬಾಲಿವುಡ್ ನಟ ಸೋನು ಸೂದ್!

'ಸಿಂಹ ಸುಮ್ಮನೆ ಕುಳಿತಿದೆ ಅಂದ್ರೆ ಸುಸ್ತಾಗಿದೆ ಅಂತಲ್ಲ, ಮುಂದಿನ ಬೇಟೆಗೆ ರೆಡಿ ಆಗ್ತಿದೆ ಎಂದರ್ಥ': ಕಿಚ್ಚ ಸುದೀಪ್ ದಿಢೀರ್ ಪೋಸ್ಟ್; ಇಲ್ಲಿದೆ ಕಾರಣ...

ಕಾನ್ಪುರದಲ್ಲಿ ತರಬೇತಿ ವಿಮಾನ ಪತನ: ಕರ್ನಾಟಕದ ಪೈಲಟ್‌ ಅಭಿಷೇಕ್​ ಸೇರಿ ಇಬ್ಬರು ಸಾವು; Video