ದೇಶ

ಕಣಿವೆ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ?

Lakshmi R

ನವದೆಹಲಿ/ಶ್ರೀನಗರ: ಕಣಿವೆ ರಾಜ್ಯದಲ್ಲಿ ಮೊದಲ ಬಾರಿಗೆ ಬಿಜೆಪಿ-ಪಿಡಿಪಿ ಸರ್ಕಾರ ಅಧಿಕಾರಕ್ಕೇರಲಿವೆ ಎಂಬ ಹಲವರ ಆಸೆಗೆ ತಣ್ಣೀರು ಬಿದ್ದಿದೆ.

ಫಲಿತಾಂಶ ಬಂದು ಇಷ್ಟು ದಿನಗಳು ಕಳೆದರೂ ಯಾವುದೇ ಪಕ್ಷಗಳ ನಡುವೆ ಮೈತ್ರಿ ಏರ್ಪಡದ ಕಾರಣ ಜಮ್ಮು ಮತ್ತು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗುವ ಸುಳಿವು ಸಿಕ್ಕಿದೆ.

ಪ್ರಭಾರ ಮುಖ್ಯಮಂತ್ರಿಯಾಗಿ ಮುಂದುವರಿದಿದ್ದ ಒಮರ್ ಅಬ್ದುಲ್ಲಾ ಅವರು ಗುರುವಾರ ರಾಜಿನಾಮೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಅಲ್ಲಿನ ರಾಜ್ಯಪಾಲ ಎನ್.ಎನ್.ವೊಹ್ರಾ ಅವರು ರಾಜ್ಯದಲ್ಲಿ ರಾಷ್ಟ್ರಪತಿ ವರದಿ ಸಲ್ಲಿಸಿದ್ದಾರೆ.

ಈ ವರದಿಯಲ್ಲಿ ಮೂರು ಸಲಹೆಗಳನ್ನು ನೀಡಲಾಗಿದೆ ಎಂದೂ ಹೇಳಲಾಗುತ್ತಿದೆ. ಚುನಾವಣೆಯಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಪಿಡಿಪಿ ಯಾವುದೇ ಪಕ್ಷದೊಂದಿಗೂ ಮೈತ್ರಿ ಮಾಡುವ ಬಗ್ಗೆ ಸ್ಪಷ್ಟ ನಿರ್ಧಾರ ತಿಳಿಸಿಲ್ಲ.

ಒಂದೊಮ್ಮೆ ಬಿಜೆಪಿ ಜತೆ, ಮತ್ತೊಮ್ಮೆ ಕಾಂಗ್ರೆಸ್ ಜೊತೆ ಎನ್ನುತ್ತಾ ಕಾಲಹರಣ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಕಣಿವೆ ರಾಜ್ಯ ರಾಷ್ಟ್ರಪತಿ ಆಳ್ವಿಕೆಗೆ ಒಳಪಡುವ ಸಾಧ್ಯತೆ ಹೆಚ್ಚಾಗಿದೆ.

SCROLL FOR NEXT