ಅಬುಜಾ: ನೈಜೀರಿಯಾದಲ್ಲಿ ಬೋಕೋ ಹರಾಮ್ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ಅಲ್ಲಿನ ಈಶಾನ್ಯ ಭಾಗದ ನಗರ ಹಾಗೂ ಹಳ್ಳಿಗಳಲ್ಲಿ ಗುಂಡಿನ ದಾಳಿ ನಡೆಸಿ 150 ಕ್ಕೂ ಹೆಚ್ಚು ಮಂದಿಯನ್ನು ಬಲಿ ತೆಗೆದುಕೊಂಡಿದ್ದಾರೆ.
ಬೋರ್ನೋ ರಾಜ್ಯದ 16 ನಗರ ಹಾಗೂ ಬಗ, ಡೋರ್ನ್-ಬಗ, ಮೈಲ್ 3, ಕೌಯನ್ ಕುರೋಸ್ ಮತ್ತು ಬುಂಡೂರಾಮ್ ಸೇರಿದಂತೆ ಹಲವು ಹಳ್ಳಿಗಳಲ್ಲಿ ದಾಳಿ ನಡೆಸಿರುವ ಉಗ್ರರು ಮನೆಗಳನ್ನು ಸುಟ್ಟುಹಾಕಿದ್ದಾರೆ.
ದಾಳಿಯಲ್ಲಿ 150 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಸರ್ಕಾರ ದೃಢಪಡಿಸಿದೆ. ಲೇಕ್ ಚಾಡ್ ದ್ವೀಪದಲ್ಲಿದ್ದ ನಾಗರಿಕರನ್ನು ಗುರಿಯಾಗಿಸಿಕೊಂಡು ದಾಳಿ ನಡೆದಿದೆ.