ಕಾರು ಮತ್ತು ಲಾರಿ ಮುಖಾಮುಖಿ ಡಿಕ್ಕಿ 
ದೇಶ

ಕಾಶ್ಮೀರದಲ್ಲಿ ಭೀಕರ ರಸ್ತೆ ಅಪಘಾತ: ಐವರು ಸಾವು

ಶ್ರೀನಗರ-ಬಾರಮುಲ್ಲ ಹೈವೇ ಮಾರ್ಗದಲ್ಲಿ ಸಂಚರಿಸುತ್ತಿದ್ದ ವೇಳೆ ಎದುರುಬದಿಯಿಂದ ಬರುತ್ತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ...

ಶ್ರೀನಗರ: ಕಾರು ಮತ್ತು ಲಾರಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಸಂಭವಿಸಿದೆ.

ಪ್ರಯಾಣಿಕರನ್ನು ಸಾಗಿಸುತ್ತಿದ್ದ ಕಾರ್‌ಒಂದು ಕುಪ್ವಾರದಿಂದ ಶ್ರೀನಗರದತ್ತ ಪ್ರಯಾಣ ಬೆಳೆಸಿತ್ತು. ಶ್ರೀನಗರ-ಬಾರಮುಲ್ಲ ಹೈವೇ ಮಾರ್ಗದ ಹೈಗಮ್-ಪಾಟ್ನ ಸಮೀಪ ಸಂಚರಿಸುತ್ತಿದ್ದ ವೇಳೆ ಎದುರುಬದಿಯಿಂದ ಬರುತ್ತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಕಾರು ನಜ್ಜುಗುಜ್ಜಾಗಿ, ಕಾರಿನಲ್ಲಿ ಪ್ರಯಾಣಿಸುತ್ತಿದ್ದವರ ಪೈಕಿ ಐದು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೂ ಕಾರಿನಲ್ಲಿದ್ದ ನಾಲ್ಕು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಯಲ್ಲಿ ಇಬ್ಬರು ಮಹಿಳೆಯರು ಹಾಗೂ ಇಬ್ಬರು ಪುರುಷರು ದಾರುಣ ಸಾವನ್ನಪ್ಪಿದ್ದಾರೆ. ಮೃತರನ್ನು ನಾಜ ಬೇಗಮ್, ಸಾರ, ಮೊದಮ್ಮದ್ ಶಫಿ ಮಲಿಕ್, ದಿಲ್ಶದ್ ಅಹಮ್ಮದ್ ಪಿರ್ ಎಂದು ಗುರುತಿಸಲಾಗಿದೆ.

ಮೃತರೆಲ್ಲರು ಕುಪ್ವಾರ ಜಿಲ್ಲೆಯವರಾಗಿದ್ದಾರೆ. ಘಟನೆಯಲ್ಲಿ ಸಾವನ್ನಪ್ಪಿರುವ 30 ವರ್ಷದ ಪುರುಷನ ಗುರುತು ಇನ್ನು ಪತ್ತೆಯಾಗಿಲ್ಲ.

ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಹಬ್ಬಗಳ ಹೊತ್ತಲ್ಲೆ ಕಾಂಗ್ರೆಸ್‌ನಿಂದ ಜನತೆಗೆ ಮತ್ತೊಂದು ಶಾಕ್: Nandini ಹಾಲಿನ ದರ ಲೀಟರ್‌ಗೆ 8 ರೂ. ಏರಿಕೆಗೆ ಸಂಪುಟ ಸಮ್ಮತಿ!

'ನಾವು ಒಂದೂವರೆ ವರ್ಷ ಪ್ರೀತಿಸುತ್ತಿದ್ದೆವು': ಲಂಡನ್ ಲವ್​ ಕಹಾನಿ ನೆನೆದು ಭಾವುಕರಾದ CM ವಿಜಯ್​ ಪುತ್ರ ಜೇಸನ್!

'ಜ್ಞಾನೇಶ್ ಕುಮಾರ್ ನೆರವಿನಿಂದ ದೇಶವನ್ನು 'ಹೈಜಾಕ್' ಮಾಡಿದ ಮೋದಿ, ಶಾ, ಭಾಗವತ್‌ರನ್ನು ಸುಮ್ಮನೆ ಬಿಡಲ್ಲ; ರಾಹುಲ್ ಗಾಂಧಿ ಗುಡುಗು!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!