ಗಂಗೆಯಲ್ಲಿ ನೂರಕ್ಕೂ ಅಧಿಕ ಮಾನವ ಶವಗಳ ಪತ್ತೆ 
ದೇಶ

ಗಂಗಾನದಿಯಲ್ಲಿ 100ಕ್ಕೂ ಅಧಿಕ ಶವಗಳು ಪತ್ತೆ!

ಪರಿಯಾರ್ ಘಾಟ್ ಗಂಗಾ ನದಿಯಲ್ಲಿ 108ಕ್ಕೂ ಅಧಿಕ ಶವಗಳು ಪತ್ತೆ

ಕಾನ್ಪೂರ: ಭಾರತದ ಪುಣ್ಯ ನದಿಗಳಲ್ಲೊಂದಾಗಿರುವ ಗಂಗಾ ನದಿಯಲ್ಲಿ 100ಕ್ಕೂ ಹೆಚ್ಚು ಮಾನವ ಶವಗಳು ಪತ್ತೆಯಾಗಿರುವುದು ಅಚ್ಚರಿ ಮೂಡಿಸಿದೆ. ಕಾನ್ಪೂರ ಯುನಾವೋ ಸಮೀಪದ ಪರಿಯಾರ್ ಘಾಟ್ ಗಂಗಾ ನದಿಯಲ್ಲಿ 108ಕ್ಕೂ ಅಧಿಕ ಶವಗಳು ಪತ್ತೆಯಾಗಿದ್ದು, ಸ್ಥಳೀಯರು ಈ ಕುರಿತು ಜಿಲ್ಲಾಡಳಿತಕ್ಕೆ ಸುದ್ದಿ ಮುಟ್ಟಿಸಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳು ಈ ಕುರಿತು ಪರಿಶೀಲನೆ ನಡೆಸಿದ್ದಾರೆ. ಈ ಮಾನವ ಶವಗಳು ಸುಮಾರು 5 ತಿಂಗಳ ಹಿಂದೆ ಇಲ್ಲಿ ತಂದು ಹೂತಿರುವ ಬಗ್ಗೆ ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಯುನಾವೋ ಅಧಿಕಾರಿಯಾದ ಪ್ರಸಾದ್ ಶುಕ್ಲಾ, ಹಿಂದೂಗಳು ನೂರಾರು ಸಂಖ್ಯೆಯಲ್ಲಿ ಶವಗಳನ್ನು ಗಂಗಾನದಿಯಲ್ಲಿ ಅಂತ್ಯಕ್ರಿಯೆ ಮಾಡುತ್ತಿದ್ದು, ಇದೀಗ ನದಿಯಲ್ಲಿ ನೀರು ಬತ್ತಿಹೋಗಿದೆ. ಆದ್ದರಿಂದ ತಳದಲ್ಲಿರುವ ಶವಗಳು ಮೇಲೆ ತೇಲಿಬಂದಿವೆ. ಆದ್ದರಿಂದ ಸ್ಥಳೀಯರು ಆತಂಕ ಪಡುವ ಅಗತ್ಯವಿಲ್ಲ. ಈ ವಿಚಾರ ಕುರಿತು ತನಿಖೆ ನಡೆಸುತ್ತೇವೆ ಎಂದು ಅವರು ವಿವರಿಸಿದ್ದಾರೆ.

ಮಕರ ಸಂಕ್ರಾತಿಯ ಹಬ್ಬದ ಹಿನ್ನೆಲೆಯಲ್ಲಿ ನದಿಯಲ್ಲಿ ಪತ್ತೆಯಾಗಿರುವ ಶವಗಳ ತೆರವಿಗೆ ಸ್ಥಳೀಯ ಜಿಲ್ಲಾಡಳಿತ ಮುಂದಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಯೋತ್ಪಾದಕ ದಾಳಿ ವಿಫಲಗೊಳಿಸಿದ ಭಾರತೀಯ ಪೈಲಟ್‌ಗೆ Israel ಅತ್ಯುನ್ನತ ಗೌರವ: ಸ್ವಾತಂತ್ರ್ಯ ದಿನಾಚರಣೆಗೆ ಪ್ರಧಾನಿ ಮೋದಿ, ಕ್ಯಾಪ್ಟನ್ ಸ್ಮಿತ್‌ಗೆ ಆಹ್ವಾನ..!

5 IAS ಅಧಿಕಾರಿಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ; ಯಾರಿಗೆಲ್ಲಾ ಬದಲಾವಣೆ

ಆಧಾರ ರಹಿತ ಆರೋಪ ಸರಿಯಲ್ಲ, ‘ದಾಖಲೆ ತೋರಿಸಿ, ಜಮೀನನ್ನೇ ನಿಮ್ಮ ಕುಟುಂಬಕ್ಕೆ ಕೊಡ್ತೀನಿ; HDK NICE ಆರೋಪಕ್ಕೆ ಸಚಿವ ಬಾಲಕೃಷ್ಣ ತಿರುಗೇಟು

SIR ಅಕ್ರಮಗಳ ಕುರಿತು ರಾಜ್ಯದಿಂದ ಪ್ರತ್ಯೇಕ ತನಿಖೆ ಇಲ್ಲ: CM ಡಿ.ಕೆ. ಶಿವಕುಮಾರ್ ಸ್ಪಷ್ಟನೆ

ಪಾಕಿಸ್ತಾನದ ಉನ್ನತ ರಾಜತಾಂತ್ರಿಕರಿಗೆ ಭಾರತದ ಸಮನ್ಸ್; ಗಡಿಯಾಚೆಗಿನ ಒಳನುಸುಳುವಿಕೆಯ ವಿರುದ್ಧ ಪ್ರತಿಭಟನೆ