ಗಂಗಾನದಿ 
ದೇಶ

ಗಂಗಾನದಿಯಲ್ಲಿ ನೂರಾರು ಶವ ಪತ್ತೆ: ತನಿಖೆಗೆ ಆದೇಶ

ಭಾರತದ ಪ್ರವಿತ್ರ ಗಂಗಾನದಿ ಶುದ್ಧಿಕರಣ...

ಲಖನೌ: ಭಾರತದ ಪ್ರವಿತ್ರ ಗಂಗಾನದಿ ಶುದ್ಧಿಕರಣಕ್ಕಾಗಿ ಕೇಂದ್ರ ಸರ್ಕಾರ ಮುಂದಾಗಿದ್ದರೆ, ಅತ್ತ ಗಂಗಾನದಿಯಲ್ಲಿ ನೂರಾರು ಶವಗಳು ತೇಲುತ್ತಿದ್ದು ತೀವ್ರ ಆಂತಕ ಸೃಷ್ಠಿಸಿದೆ.

ಉತ್ತರಪ್ರದೇಶದ ಉನ್ನಾವೋ ಜಿಲ್ಲೆಯ ಪೆರಿಯಾರ್ ಘಾಟ್ ಬಳಿಯ ಕೆನಾಲ್‌ನಲ್ಲಿ 100ಕ್ಕೂ ಹೆಚ್ಚು ಅನಾಥ ಶವಗಳು ತೇಲುತ್ತಿದ್ದು ತೀವ್ರ ಆಂತಕ ಸೃಷ್ಠಿಸಿದೆ. ಪ್ರಕರಣವನ್ನು ಉತ್ತರಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಸರ್ಕಾರ ತನಿಖೆಗೆ ಆದೇಶಿಸಿದೆ.

ಸರಿಯಾಗಿ ಅಂತ್ಯಕ್ರಿಯೆ ನಡೆಸದೇ ಗಂಗಾನದಿಯಲ್ಲಿ ಶವಗಳನ್ನು ತೇಲಿಬಿಟ್ಟಿರಬಹುದು ಎಂಬ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಅಲ್ಲದೆ ಗಂಗಾನದಿಯ ನೀರಿನ ಮಟ್ಟ ಕಡಿಮೆಯಾಗುತ್ತಿದ್ದಂತೆ ಈ ಶವಗಳು ಹೊರ ಬಂದಿರುವ ಶಂಕೆ ವ್ಯಕ್ತವಾಗಿದೆ. ಮತ್ತೊಂದೆಡೆ ಕೊಲೆ ಮಾಡಿ ಈ ಶವಗಳನ್ನು ಗಂಗಾನದಿಯಲ್ಲಿ ಎಸೆದಿರುವ ಬಗ್ಗೆಯೂ ಗುಮಾನಿ ಇದ್ದು, ಸರ್ಕಾರ ಉನ್ನತ ಮಟ್ಟದ ತನಿಖೆಗೆ ಆದೇಶ ನೀಡಿದೆ.

ಇನ್ನು ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಜಲಸಂಪನ್ಮೂಲ ಸಚಿವೆ ಉಮಾ ಭಾರತಿ, ಉತ್ತರಪ್ರದೇಶ ಸರ್ಕಾರದಿಂದ ಮಾಹಿತಿ ಕೇಳಿದ್ದು, ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಸಲಾಗುವುದು ಎಂದು ಭರವಸೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜ್ಞಾನೇಶ್ ಕುಮಾರ್ ನೆರವಿನಿಂದ ದೇಶವನ್ನು 'ಹೈಜಾಕ್' ಮಾಡಿದ ಮೋದಿ, ಶಾ, ಭಾಗವತ್‌ರನ್ನು ಸುಮ್ಮನೆ ಬಿಡುವುದಿಲ್ಲ; ರಾಹುಲ್ ಗಾಂಧಿ ಗುಡುಗು!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

ಗಣೇಶ ವಿಸರ್ಜನೆ ವಿಚಾರವಾಗಿ ಜಿಲ್ಲಾಧಿಕಾರಿ - SP ನಡುವೆ ಜಟಾಪಟಿ; 'ಹೇಗೆ ರಿಪೇರಿ ಮಾಡಬೇಕೆಂದು ಗೊತ್ತಿದೆ' ಎಂದ ಎಚ್‌ಡಿ ರೇವಣ್ಣ

ಹೆಲಿಕಾಪ್ಟರ್‌ನಿಂದ ಉಳಿಯುವಾಗ 2 ತಿಂಗಳ ಮಗುವಿನೊಂದಿಗೆ ಎಡವಿದ ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಪತ್ನಿ ಉಷಾ, Video

ಹೀಗೂ ಉಂಟೆ?: BJP ಶಾಸಕನ ಬಂಗಲೆ ತೊಳೆಯಲು ಹೋದ ಅಗ್ನಿಶಾಮಕ ವಾಹನ; ವಿಡಿಯೋ ವೈರಲ್‌ ಬೆನ್ನಲ್ಲೇ ₹2,700 ದಂಡ!