ಮಾಜಿ ಕೇಂದ್ರ ಸಚಿವ ಶಶಿ ತರೂರ್ ಮತ್ತು ಸುನಂದಾ ಪುಷ್ಕರ್ 
ದೇಶ

ಶಶಿ ತರೂರ್ ಮೇಲೆ ಪೊಲೀಸರ ನಿಗಾ!

ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಸಚಿವ ಶಶಿ ತರೂರ್ ಅವರ ಪತ್ನಿ ಸುನಂದಾ ಪುಷ್ಕರ್ ಅವರ...

ನವದೆಹಲಿ: ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಸಚಿವ ಶಶಿ ತರೂರ್ ಅವರ ಪತ್ನಿ ಸುನಂದಾ ಪುಷ್ಕರ್ ಅವರ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಶಶಿ ತರೂರ್ ಮೇಲೆ  ದೆಹಲಿ ಪೊಲೀಸರು ಹೆಚ್ಚಿನ ನಿಗಾ ವಹಿಸಿದ್ದಾರೆ.

ಸುನಂದಾ ಪುಷ್ಕರ್ ಹತ್ಯಾ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಈ ವರೆಗೂ ಸಾವಿಗೆ ಸಂಬಂಧಿಸಿದಂತೆ ಯಾವುದೇ ಪ್ರಮುಖ ಸಾಕ್ಷಾಧಾರಗಳು ದೊರೆತ್ತಿಲ್ಲ. ಈ ಹಿನ್ನೆಲೆಯಲ್ಲಿ ತನಿಖೆ ಮುಂದುವರೆಸಿರುವ ಪೊಲೀಸರು ಸುನಂದಾ ಅವರು ಸಾವನ್ನಪ್ಪಿದ್ದ ಹೋಟೆಲ್‌ನ ಸಿಬ್ಬಂಧಿಗಳನ್ನು ತನಿಖೆಗೊಳಪಡಿಸಿದ್ದಾರೆ. ಅಲ್ಲದೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿರುವ ಸುನಂದಾ ಪುಷ್ಕರ್ ಅವರ ಪತಿ ಶಶಿ ತರೂರ್ ಅವರ ಚಲನವಲನದ ಮೇಲೆ ನಿಗಾ ಇರಿಸಿದ್ದಾರೆ.

ದೆಹಲಿಯ ಚಾಣಕ್ಯಪುರಿಯ ಲೀಲಾ ಪ್ಯಾಲೆಸ್ ಪಂಚತಾರಾ ಹೊಟೆಲ್‌ನ ರೂಮ್ ನಂ.345ರಲ್ಲಿ ಜನವರಿ 17ರ ರಾತ್ರಿ ಸುನಂದಾ ಪುಷ್ಕರ್ ಅವರು ನಿಗೂಢವಾಗಿ ಸಾವನ್ನಪ್ಪಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT