ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಭಾರತೀಯ ಸೇನಾಪಡೆ ಇಬ್ಬರು ಭಯೋತ್ಪಾದಕರನ್ನು ಗುರುವಾರ ಎನ್‌ಕೌಂಟರ್ ಮಾಡಿದ್ದಾರೆ.
ಶೋಪಿಯನ್ ಜಿಲ್ಲೆಯಲ್ಲಿ ಉಗ್ರರು ಮತ್ತು ಭದ್ರತಾ ಪಡೆ ಮಧ್ಯೆ ನಡೆಯುತ್ತಿರುವ ಗುಂಡಿನ ಕಾಳಗದಲ್ಲಿ ಇಬ್ಬರು ಉಗ್ರರನ್ನು ಭದ್ರತಾ ಪಡೆ ಎನ್‌ಕೌಂಟರ್ ಮಾಡಿದ್ದಾರೆ.
ಭದ್ರತಾ ಪಡೆ ಉಗ್ರರ ವಿರುದ್ಧ ಕೈಗೊಂಡಿರುವ ಕಾರ್ಯಾಚರಣೆಯನ್ನು ಮುಂದುವರೆಸಿದ್ದು, ಕಾದರ್ ಅರಣ್ಯ ಪ್ರದೇಶದಲ್ಲಿ ಉಗ್ರರು ಅಡಗಿರುವ ಶಂಕೆ ವ್ಯಕ್ತವಾಗಿದೆ ಎಂದು ತಿಳಿದು ಬಂದಿದೆ.